ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಳ್ಯ ತಾಲೂಕು, ಗುತ್ತಿಗಾರು ವಲಯ ಇದರ ವತಿಯಿಂದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ಧ ಪ್ರಯುಕ್ತ ಎ.ಜೆ.ಆಸ್ಪತ್ರೆ ಮಂಗಳೂರು ಹಾಗೂ ಕೆ.ವಿ.ಜಿ. ಆಸ್ಪತ್ರೆ ಸುಳ್ಯ ಇವರ ಸಹಯೋಗ ದೊಂದಿಗೆ ಬೃಹತ್ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರ ಇಂದು (ಮಾ.21) ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರಿನಲ್ಲಿ ನಡೆಯಲಿದೆ. ರಕ್ತದಾನಿಗಳು ಭಾಗವಹಿಸುವಂತೆ ಹಾಗೂ ಸಾರ್ವಜನಿಕ ರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸಂಘಟಕರು ವಿನಂತಿಸಿದ್ದಾರೆ.