ಮಾ.27 – 28: ಬೆಳ್ಳಾರೆ ಜ್ಞಾನದೀಪದಲ್ಲಿ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ತರಬೇತಿ ಶಿಬಿರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಭಾರತ್ ಸೇವಕ್ ಸಮಾಜದ ವತಿಯಿಂದ ಬೆಳ್ಳಾರೆ ಮತ್ತು ಸುಳ್ಯದಲ್ಲಿ ನಡೆಸಲ್ಪಡುತ್ತಿರುವ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ಎರಡು ದಿನಗಳ ತರಬೇತಿ ಶಿಬಿರ ಬೆಳ್ಳಾರೆಯ ಜ್ಞಾನದೀಪ ಸಂಸ್ಥೆಯಲ್ಲಿ ಮಾ.೨೭ ಮತ್ತು ಮಾ. 28 ರಂದು ನಡೆಯಲಿದೆ.

ಮಾ.27 ರಂದು ಬೆಳಿಗ್ಗೆ ಉದ್ಘಾಟನಾ ಸಮಾರಂಭದಲ್ಲಿ ಬಳಿಕ ರಂಗ ಕಲಾವಿದ ಮೌನೇಶ್ ವಿಶ್ವಕರ್ಮ ಅವರಿಂದ ರಂಗ ತರಬೇತಿ, ಭಾರತ್ ಸೇವಕ್ ಸಮಾಜದ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲಾ ಸಂಯೋಜಕ ರಘುಕುಮಾರ್ ಪಿ ಅವರಿಂದ ಕಮಿಷನ್ ಕ್ಲಾಸ್, ಅಪರಾಹ್ನ ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಬಿ.ವಿ ಸೂರ್‍ಯನಾರಾಯಣ ಅವರಿಂದ ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕೌಶಲ್ಯ ತರಬೇತಿ, ನೆನಪಿನ ಪರೀಕ್ಷೆ, ಮಹಿಳೆ ಮತ್ತು ಆರೋಗ್ಯ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಮಾ.೨೮ರಂದು ಬೆಳಿಗ್ಗೆ ಯೋಗ ಮತ್ತು ಪ್ರಾಣಾಯಮ ತರಗತಿ ಬಳಿಕ ಸಭಾ ಕಾರ್ಯಕ್ರಮ ನಿರ್ವಹಣಾ ತರಬೇತಿ, ಉಜಿರೆ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಅವರಿಂದ ಪ್ರೇರಣಾ ಕೌಶಲ್ಯ ತರಬೇತಿ ನಡೆಯಲಿದೆ. ಅಪರಾಹ್ನ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಮ್ಮಿಲನ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.