Breaking News

ಬೆಟ್ಟಂಪಾಡಿ : ವಿಶ್ವ ಮಹಿಳಾ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕೊರೋನಾ ಜಾಗೃತಿ ಕಾರ್ಯಾಗಾರ

ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಮತ್ತು ನೇತ್ರಾವತಿ ಮಹಿಳಾ ಮಂಡಲ ಬೆಟ್ಟಂಪಾಡಿ ಸುಳ್ಯ ಇದರ ಆಶ್ರಯದಲ್ಲಿ ಕೊರೋನಾ ಜಾಗೃತಿ ಕಾರ್ಯಕ್ರಮ ಮತ್ತು ವಿಶ್ವ ಮಹಿಳಾ ದಿನಾಚರಣೆಯು ಮಾ. 21 ರಂದು ಬೆಟ್ಟಂಪಾಡಿಯ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು.

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪೂರ್ವಾಧ್ಯಕ್ಷೆ ಚಂದ್ರಾಕ್ಷಿ ಜೆ. ರೈ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪಲ್ಲವಿ ಕೆ.ಸಿ. ಕೊರೋನಾ ಬಗ್ಗೆ ಮಾಹಿತಿ ನೀಡಿದರು.

ಭಜನಾ ಮಂದಿರದ ಅಧ್ಯಕ್ಷ ಚಂದ್ರ ರಾವ್, ಮಹಿಳಾ ಮಂಡಲದ ಪೂರ್ವಾಧ್ಯಕ್ಷೆ ನಳಿನಿ ರೈ, ಸ್ಥಾಪಕಾಧ್ಯಕ್ಷೆ ಜಯಶ್ರೀ ಲೋಕನಾಥ್ ವೇದಿಕೆಯಲ್ಲಿದ್ದರು.
ಗೀತಾ ಸರಸ್ವತಿ ಜಯಶ್ರೀ ಪ್ರಾರ್ಥಿಸಿದರು. ಮಹಿಳಾ ಮಂಡಳದ ಅಧ್ಯಕ್ಷೆ ಶ್ರೀಮತಿ ಲಲಿತಾ ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಜಲಜಾಕ್ಷಿ ಸ್ವಾಗತಿಸಿ, ಶ್ರೀಮತಿ ಹಸ್ತ ವಂದಿಸಿದರು. ಶ್ರೀಮತಿ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು.
ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.