ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್ ಸಿಸಿ ಘಟಕದ ವತಿಯಿಂದ ವಿಶ್ವ ಜಲ ದಿನಾಚರಣೆಯನ್ನು ಮಾ. 22ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪೂವಪ್ಪ ಕಣಿಯೂರು ರವರು ಎನ್ ಸಿಸಿ ವಿದ್ಯಾರ್ಥಿಗಳು ತಯಾರಿಸಿದ ಜನಜಾಗೃತಿ ಭಿತ್ತಿ ಚಿತ್ರವನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹರಿಪ್ರಸಾದ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಜನಜೀವನದ ಬಗ್ಗೆ ಮಾಹಿತಿಯನ್ನು ನೀಡಿದರು. ಲೆಫ್ಟಿನೆಂಟ್ ಸೀತಾರಾಮ್ ಎಂ.ಡಿ. ಸ್ವಾಗತಿಸಿದರು. ಎನ್ ಸಿಸಿ ಕೆಡೆಟ್ ಸಂಧ್ಯಾ ಎಂ. ಆರ್. ವಂದಿಸಿದರು. ಕಾಲೇಜಿನ ಎನ್ ಸಿಸಿ ವಿದ್ಯಾರ್ಥಿಗಳು ಬೋಧಕ ಬೋಧಕೇತರ ವೃಂದದವರು ಹಾಗೂ ಕಾಲೇಜಿನ ಇತರ ವಿದ್ಯಾರ್ಥಿಗಳು ಇದ್ದರು.