ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ಸ್ವಯಂಸೇವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನಡೆಯಿತು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಸಂಯೋಜಕಿ ಬಿಂದು ಕೆ.ವಿ. ಉಪಸ್ಥಿತರಿದ್ದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ವಿವಿಧ ಚಟುವಟಿಕೆಗಳ ಮೂಲಕ ಸ್ವಯಂಸೇವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನಡೆಸಿಕೊಟ್ಟರು. ಎನ್.ಎಸ್.ಎಸ್ ಸ್ವಯಂ ಸೇವಕ ಹಿತೇಶ್ ಸ್ವಾಗತಿಸಿ, ಮಹಮ್ಮದ್ ಅಡ್ನಾನ್ ವಂದಿಸಿದರು. ಮಹಮ್ಮದ್ ಅಫೀಜ್ ಕಾರ್ಯಕ್ರಮ ನಿರೂಪಿಸಿದರು.