ಕ್ರಾಂತಿಕಾರಿ ತ್ರಿವಳಿ ದೇಶಭಕ್ತರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಬಲಿದಾನದ ಸ್ಮರಣೆ ಪ್ರಯುಕ್ತ ಪಂಜಿನ ಮೆರವಣಿಗೆಯು ಕಡಬದ ರಾಜ್ಯ ರಸ್ತೆಯಲ್ಲಿ ಸಾಗಿ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿಸಭಾ ಕಾರ್ಯಕ್ರಮ ನಡೆಯಿತು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ದಿಕ್ಸೂಚಿ ಭಾಷಣ ನಡೆಸಿಕೊಟ್ಟರು.
ವೇದಿಕೆಯಲ್ಲಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಗುರುದತ್ ನಾಯಕ್, ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕರದ ಕೃಷ್ಣ ಶೆಟ್ಟಿ ಕಡಬ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ರೈ ಮೇನಾಲ, ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಅಧ್ಯಕ್ಷರಾದ ಕೃಷ್ಣ ಎಂ. ಆರ್, ಕಡಬ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎ. ಪಿ ಗಿರೀಶ್ ಹಾಗೂ ಮಂಡಲ ಯುವಮೋರ್ಚಾ ಪದಾಧಿಕಾರಿಗಳು, ಸದಸ್ಯರು, ವಿವಿಧ ಶಕ್ತಿ ಕೇಂದ್ರದ ಪದಾಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.