ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಕೊರೋನಾ ಜನಜಾಗೃತಿ ಕಾರ್ಯಕ್ರಮವು ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ, ಗ್ರಾಮ ಪಂಚಾಯತ್ ಅಜ್ಜಾವರ ಸುಳ್ಯ ಹಾಗೂ ಸಮುದಾಯ ಆರೋಗ್ಯ ವಿಭಾಗ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಹಯೋಗದಲ್ಲಿ ಮಾ. 26 ರಂದು ನಡೆಯಿತು.
ಶ್ರೀಮತಿ ಬೇಬಿ ಸದಸ್ಯರು ಗ್ರಾಮ ಪಂಚಾಯಿತಿ ಅಜ್ಜಾವರ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯನ್ನು ಎನ್.ಎಂ.ಸಿಯ ಪ್ರಾಂಶುಪಾಲ ಡಾ. ಪೂವಪ್ಪ ಕಣಿಯೂರು ಅವರು ಉದ್ಘಾಟಿಸಿದರು. ಅಜ್ಜಾವರ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು ಪ್ರಾರ್ಥಿಸಿದ ಸಭೆಯಲ್ಲಿ ನೆಹರು ಮೆಮೋರಿಯಲ್ ಕಾಲೇಜಿನ ನ್ಯಾಕ್ ಸಂಯೋಜಕಿ ಶ್ರೀಮತಿ ರತ್ನಾವತಿ ಡಿ. ಸ್ವಾಗತಿಸಿದರು.
ಡಾ. ನಾಗರಾಜಾಚಾರಿ, ಮುಖ್ಯಸ್ಥರು ಸಮುದಾಯ ಆರೋಗ್ಯ ವಿಭಾಗ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ದಿನೇಶ್ ಪಿ.ವಿ, ಸಹಪ್ರಾಧ್ಯಾಪಕರು ಸಮುದಾಯ ಆರೋಗ್ಯ ವಿಭಾಗ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕೋವಿಡ್-೧೯ರ ಬಗ್ಗೆ ಮಾಹಿತಿ ಹಾಗೂ ಜನರು ಕೈಗೊಳ್ಳಬೇಕಾದಂತಹ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ಮತ್ತು ಕರಪತ್ರಗಳನ್ನು ವಿತರಿಸಲಾಯಿತು. ಪ್ರಸ್ತುತ ಸಭೆಯಲ್ಲಿ ಅಜ್ಜಾವರ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಶ್ರೀ ಗೋಪಿನಾಥ್ ಮಿತ್ತಡ್ಕ ಹಾಗೂ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯರಾದ ಶ್ರೀಮತಿ ಪರಮೇಶ್ವರಿಯವರು ಉಪಸ್ಥಿತರಿದ್ದರು. ನೆಹರು ಮೆಮೋರಿಯಲ್ ಕಾಲೇಜಿನ ಉಪನ್ಯಾಸಕರು,ಅಜ್ಜಾವರ ಸರ್ಕಾರಿ ಪ್ರೌಢಶಾಲೆ ಅಧ್ಯಾಪಕರು, ಗ್ರಾಮ ಪಂಚಾಯಿತಿನ ಸದಸ್ಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಶ್ರೀ ರುದ್ರಕುಮಾರ್ ಎಂ.ಎಂ ಧನ್ಯವಾದವನ್ನು ಸಮರ್ಪಿಸಿದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮಧುರಾ ಎಂ.ಆರ್ ಕಾರ್ಯಕ್ರಮವನ್ನು ನಿರೂಪಿಸಿದರು.
—————