ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ ಇದರ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ , ಗ್ರಾಮ ಪಂಚಾಯತ್ ಜಾಲ್ಸೂರು,ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸೋಣಂಗೇರಿ ಮತ್ತು ಪಡಿ ವೇಲೊರೆಡ್ ಮಂಗಳೂರು ಇವುಗಳ ಆಶ್ರಯದಲ್ಲಿ “ಮಕ್ಕಳ ಹಕ್ಕುಗಳು ಮತ್ತು ಹೆಣ್ಣು ಮಕ್ಕಳ ಸುರಕ್ಷತೆ ” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸೋಣಂಗೇರಿ ಇಲ್ಲಿ ನಡೆಯಿತು, ಕಾರ್ಯಕ್ರಮದಲ್ಲಿ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ.ಸುಪ್ರೀಯ ಪಿ.ಆರ್ ಪ್ರಾಸ್ತಾವಿಕ ಮಾತನಾಡಿದರು, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದ ಸುಳ್ಯ ತಾಲೂಕು ಸಮನ್ವಯ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಕಾಡುತೋಟ ಮಾತನಾಡಿ ಮಕ್ಕಳ ಹಕ್ಕುಗಳು ಕೇವಲ ಹೇಸರಿಗಷ್ಟೇ ಸೀಮಿತವಾಗದೆ, ಮಕ್ಕಳಿಗೆ ಅವರ ಹಕ್ಕುಗಳನ್ನು ತಿಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರಾಗಿದೆ ಮತ್ತು ಹೆಣ್ಣು ಮಕ್ಕಳ ಕುರಿತು ಸಾಮಾಜದ ಕೆಟ್ಟ ದೃಷ್ಟಿಕೋನ ಬದಲಾಗಬೇಕು ಹಾಗು ಮನೆಯಿಂದಲೇ ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗಬೇಕು ಎಂಬ ಕುರಿತು ಸಂಪೂರ್ಣ ಮಾಹಿತಿ ನೀಡಿದರು, ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸವಿತಾ.ಎನ್.ಪಿ ಮತ್ತು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮೀ ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು, ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ.ಕೆ.ಎಂ ಬಾಬು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕಾರ್ಯಕ್ರಮದಲ್ಲಿ ಜಾಲ್ಸೂರು ಗ್ರಾಮ ಪಂಚಾಯತ್ ನ ಸದಸ್ಯರು ,ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಶಾಲಾ ಮಕ್ಕಳು , ಪೋಷಕರು ಹಾಗೂ ಶಾಲಾ ಶಿಕ್ಷಕ ವೃಂದದವರು ಭಾಗವಹಿಸಿದ್ದರು.. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಗಣೇಶ ಪಿ ಸ್ವಾಗತಿಸಿ, ವಂದಿಸಿದರು ವನಿತಾ ಕಾರ್ಯಕ್ರಮ ನಿರೂಪಿಸಿದರು