ಬಿಜೆಪಿ ಎಸ್.ಸಿ. ಮೋರ್ಚಾ ರಾಷ್ಟ್ರೀಯ ಘಟಕದ ಪುನರ್ ರಚನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸಚಿವ ಎಸ್.ಅಂಗಾರರಿಗೆ ಅವಕಾಶ

ಬೆಂಗಳೂರು: ಬಿಜೆಪಿ ಎಸ್.ಸಿ. ಮೋರ್ಚಾದ ರಾಷ್ಟ್ರೀಯ ಘಟಕವನ್ನು ಪುನರ್ ರಚಿಸಲಾಗಿದ್ದು ಸಚಿವ ಎಸ್.ಅಂಗಾರ ಸಹಿತ ರಾಜ್ಯದ ಕೆಲ ಪ್ರಮುಖರಿಗೆ ಇದರಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಸ್.ಸಿ. ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಾಲಾ ಸಿಂಹ ಆರ್ಯ ಅವರ ನೇತೃತ್ವದಲ್ಲಿ ಘಟಕವನ್ನು ಪುನರ್ ರಚಿಸಲಾಗಿದೆ.
ರಾಜ್ಯದಿಂದ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರೂ ಆಗಿರುವ ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಅರಣ್ಯ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ, ಪಶು ಸಂಗೋಪನೆ ಇಲಾಖೆ ಸಚಿವರಾದ ಪ್ರಭು ಚೌಹಾಣ್ ಇವರನ್ನು ನೇಮಿಸಲಾಗಿದೆ.ಇವರು ಮುಂದಿನ ಮೂರು ವರ್ಷಗಳ ಕಾಲ ದೇಶಾದ್ಯಂತ ಪರಿಶಿಷ್ಟ ಸಮುದಾಯಗಳ ಸಂಘಟನೆಯ ದೃಷ್ಟಿಯಿಂದ ಕೆಲಸ ಮಾಡಲಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಿಣಿ ಖಾಯಂ ಆಹ್ವಾನಿತರಾಗಿ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರಾಗಿ ಮಾಜಿ ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ವೀರಯ್ಯ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಕೋಲಾರದ ವೆಂಕಟೇಶ ಮೌರ್ಯ ಅವರನ್ನು ನೇಮಿಸಲಾಗಿದೆ ಎಂದು ಪರಿಶಿಷ್ಟ ಜಾತಿಯ ರಾಷ್ಟ್ರೀಯ ಅಧ್ಯಕ್ಷ ಲಾಲಾ ಸಿಂಹ ಆರ್ಯ ಅವರು ತಿಳಿಸಿದ್ದಾರೆ.ಎಸ್.ಸಿ. ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿಗೆ ನೇಮಕಗೊಂಡ ರಾಜ್ಯದ ಎಲ್ಲಾ ಪ್ರಮುಖರನ್ನು ಬಿಜೆಪಿ ರಾಜ್ಯಾಧ್ಯಕ್ಷ, ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಅಭಿನಂದಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.