Breaking News

ಕೊರೋನಾ ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle

 

ದ.ಕ ಜಿಲ್ಲೆಯಾದ್ಯಂತ ಸಾರ್ವಜನಿಕ ಮತ್ತು ಧಾರ್ಮಿಕ ಆಚರಣೆಗಳಿಗೆ ನಿಷೇಧ: ದ.ಕ ಜಿಲ್ಲಾಧಿಕಾರಿ ಆದೇಶ

ಆದೇಶ ಉಲ್ಲಂಘಿಸಿದರೆ ಪ್ರಕರಣ ದಾಖಲು

ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಲ್ಲಿ ಕೊವಿಡ್ ಪ್ರಕರಣಗಳು ಸತತವಾಗಿ ಏರಿಕೆಯಾಗುತ್ತಿರುವುದರಿಂದ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಎಲ್ಲಾ ರೀತಿಯ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.


ಕೋವಿಡ್ ಹರಡುವಿಕೆ ಆತಂಕವು ಇರುವುದರಿಂದ ಎಲ್ಲಾ ರೀತಿಯ ಆಚರಣೆಗಳನ್ನು ಸಾಂಕೇತಿಕವಾಗಿ ಆಚರಿಸುವುದು ಮತ್ತು ಮುಂಬರುವ ಧಾರ್ಮಿಕ ಹಬ್ಬಗಳಾದ ಹೋಳಿ, ಯುಗಾದಿ, ಗುಡ್ ಫ್ರೈಡೆ, ಬರಾಅತ್, ಇತ್ಯಾದಿ ಸಂದರ್ಭಗಳಲ್ಲಿ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನಳು, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳಲ್ಲಿ ಸಾರ್ವಜನಿಕ ಸಮಾರಂಭಗಳು- ಸಭೆಗಳನ್ನು, ಜಾತ್ರೆ- ಮೇಳಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳದೆ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸಲು ಆದೇಶಿಸಲಾಗಿದೆ.

ಆದೇಶಗಳನ್ನು ಉಲ್ಲಂಘಿಸಿದ ವ್ಯಕ್ತಿಗಳ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಜರುಗಿಸುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.