ಕೇರಳ ರಾಜ್ಯ ವಿಧಾನಸಭಾ ಚುನಾವಣೆಯ ಕಾಸರಗೋಡು ಕ್ಷೇತ್ರದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಐ ಯು ಎಂ ಎಲ್ ಅಭ್ಯರ್ಥಿಯ ಚುನಾವಣಾ ಪ್ರಚಾರದಲ್ಲಿ ಕಾಸರಗೋಡು ಕ್ಷೇತ್ರದಿಂದ ಯು ಡಿ ಎಫ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎನ್ ಎ ನೆಲ್ಲಿಕುನ್ನು, ಮಂಜೇಶ್ವರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಎ ಕೆ ಎಂ ಅಶ್ರಫ್ ರವರ ಪರವಾಗಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪಕ್ಷದ ಸುಳ್ಯ ತಾಲೂಕು ಸಮಿತಿಯ ಅಧ್ಯಕ್ಷ ಹಾಜಿ ಇಬ್ರಾಹಿಂ ಕತ್ತರ್ ಮಂಡೆಕೋಲು, ಕಡಬ ಸಮಿತಿಯ ಮುಖಂಡ ಎ ಎಸ್ ಇ ಕರೀಂ, ಕಲೀಲ್ ಮಾರ್ಗ ಮೊದಲಾದವರು ಭಾಗವಹಿಸಿ ಚುನಾವಣಾ ಪ್ರಚಾರ ನಡೆಸಿದರು.