ಐವರ್ನಾಡು ಗ್ರಾಮ ವಿಕಾಸ ಸಭಾ ಭವನದಲ್ಲಿ ಸ್ವಚ್ಛ ಭಾರತ ಅಭಿಯಾನ ಹಾಗೂ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ವಿಚಾರ ವಿನಿಮಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿಯವರ ಅಧ್ಯಕ್ಷತೆಯಲ್ಲಿ ಮತ್ತು ವರ್ತಕರ ಸಂಘದ ಅಧ್ಯಕ್ಷ ಕರುಣಾಕರ ನೆಕ್ರೆಪ್ಪಾಡಿಯವರ ಉಪಸ್ಥಿತಿಯಲ್ಲಿ ಎ.03 ರಂದು ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಮಾತನಾಡಿ ವರ್ತಕರು ಹಾಗೂ ಗ್ರಾಮ ಪಂಚಾಯತ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪರಸ್ಪರ ಕೈ ಜೋಡಿಸಿ ಕೆಲಸ ಮಾಡಬೇಕೆಂದು ಹೇಳಿದರು.
ಎ.4 ರಂದು ಸ್ವಚ್ಛ ಸ್ವಾತಂತ್ರ್ಯ ಸಂಭ್ರಮ ಕಾರ್ಯಕ್ರಮದ ಹೆಸರಿನಲ್ಲಿ ಐವರ್ನಾಡು ಪೇಟೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಹಾಗೂ ನಾಗರಿಕರ ಸಹಕಾರದೊಂದಿಗೆ ನಡೆಸಲು ಸ್ವಚ್ಛತಾ ಶ್ರಮದಾನ ಎರಡನೆ ಕಾರ್ಯಕ್ರಮವನ್ನು ವರ್ತಕ ಸಂಘದ ಸಹಭಾಗಿತ್ವದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ವರ್ತಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು. ವರ್ತಕ ಸಂಘದ ಅಧ್ಯಕ್ಷ ಕರುಣಾಕರ ಗೌಡ ಸ್ವಾಗತಿಸಿದರು .
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೇಖರ್.ಯು.ಡಿ ಪ್ರಾಸ್ತಾವಿಕ ಮಾತನಾಡಿ ವಂದಿಸಿದರು.