ನಾಡಹಬ್ಬಗಳ ದಿನಾಚರಣೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಡಾ.ಬಾಬು ಜಗಜೀವನ್ ರಾಮ್ ರವರ 114 ನೇ ಜನ್ಮ ದಿನಾಚರಣೆ ಸುಳ್ಯ ನ.ಪಂ. ಸಭಾಂಗಣದಲ್ಲಿ ಎ.5 ರಂದು ನಡೆಯಿತು.
ನ.ಪಂ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಅನಿತಾಲಕ್ಷ್ಮೀ, ನ.ಪಂ.ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಬುದ್ದ ನಾಯ್ಕ್ ವೇದಿಕೆಯಲ್ಲಿದ್ದರು. ಪತ್ರಕರ್ತ ಜಯಪ್ರಕಾಶ್ ಕುಕ್ಕೆಟ್ಟಿ ಉಪನ್ಯಾಸ ನೀಡಿದರು.
ಶ್ರೀಮತಿ ಗಿರಿಜಾ ಪ್ರಾರ್ಥಿಸಿದರು
ಸಮಾಜ ಕಲ್ಯಾಣಾಧಿಕಾರಿ ಚಂದ್ರಶೇಖರ ಪೇರಾಲು ಸ್ವಾಗತಿಸಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ್ ರೈ ವಂದಿಸಿದರು. ಶಿಕ್ಷಣ ಸಂಯೋಜಕ ವಸಂತ ಏನೆಕಲ್ಲು ಕಾರ್ಯಕ್ರಮ ನಿರೂಪಿಸಿದರು.