ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ : ಸಚಿವ ಅಂಗಾರ
ಯೇನೆಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ 2019- 20 ನೇ ಸಾಲಿನ ಯೋಜನಾ ಕಾರ್ಯಕ್ರಮದಡಿ ಮೂಲಭೂತ ಸೌಕರ್ಯಗಳಿಗಾಗಿ ಬಿಡುಗಡೆಗೊಂಡಿದ್ದ ರೂ 47.25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ತರಗತಿ ಕೊಠಡಿಗಳ ಉದ್ಘಾಟನೆ ಇಂದು ನಡೆಯಿತು.
ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರರು ತರಗತಿ ಕೊಠಡಿಗಳನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಬೋಜೇಗೌಡ ಮುಖ್ಯ ಅತಿಥಿಗಳಾಗಿದ್ದರು. ಕಡಬ ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಕುಮಾರಿ ರಾಜೇಶ್ವರಿ ಕನ್ಯಾಮಂಗಲ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಆಶಾ ತಿಮ್ಮಪ್ಪ, ತಾಲ್ಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಸುಳ್ಯ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್.ಪಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮೀರಾ ಸಾಹೇಬ್ ಕಡಬ ಉಪಸ್ಥಿತರಿದ್ದರು.
ಸನ್ಮಾನ : ಸಭೆಯಲ್ಲಿ ಸಚಿವ ಎಸ್ ಅಂಗಾರ, ಬಿಲ್ಡಿಂಗ್ ಕಾಂಟ್ರಾಕ್ಟರ್ ಶಬ್ಬೀರ್ ಎಸ್, ಶಾಲೆಗೆ ಸಹಕಾರ ನೀಡಿದ ಮೀರಾ ಸಾಹೇಬ್, ತಿಲಕ್ ಎ.ಎ. ಇವರನ್ನು ಸನ್ಮಾನಿಸಲಾಯಿತು. ಶಾಲೆಯ ಸೌಂದರೀಕರಣಕ್ಕಾಗಿ ಗೋಡೆಯಲ್ಲಿ ವರ್ಲಿ ಚಿತ್ರವನ್ನು ಉಚಿತವಾಗಿ ನಿರ್ಮಿಸಿಕೊಟ್ಟ ಸುಬ್ರಹ್ಮಣ್ಯಕ್ಕೆ ಎಂ ಇವರನ್ನು ಗೌರವಿಸಲಾಯಿತು
ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗಾಯತ್ರಿ ತಿಲಕ್ ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಅನ್ನಪೂರ್ಣ ವಂದಿಸಿದರು. ಶಿಕ್ಷಕ ವಿಜಯಕುಮಾರ್ ಕಾರ್ಯಕ್ರಮ ನಿರೂಪಿಸಿದರು ಶಿಕ್ಷಕರಾದ ಗಣೇಶ್ ಪಿ, ಗಾಯತ್ರಿ, ಶಾರದಾ, ಹರ್ಷಲತಾ, ಸಹಕರಿಸಿದರು.