ದೇಶಾದ್ಯಂತ ಕೊರೊನಾ ವೈರಸ್ ನ 2ನೇ ಅಲೆ ಪ್ರಾರಂಭವಾಗಿದ್ದು ಜಿಲ್ಲೆಯಲ್ಲೂ ಕೂಡಾ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದೆ. ಈ ವೈರಾಣುವಿನ ವಿರುದ್ದ ಹೋರಾಡಲು ಈಗಾಗಲೇ ದೇಶಾದ್ಯಂತ ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಎ. 7ರಂದು ಬೆಳಿಗ್ಗೆ ಗಂಟೆ 10 ರಿಂದ ಸಂಜೆ 4 ಗಂಟೆಯವರೆಗೆ ಕಳಂಜ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೊರೊನಾ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಲಸಿಕೆ ಪಡೆಯಲು ಬರುವಾಗ ಕಡ್ಡಾಯವಾಗಿ ಆಧಾರ್ ಪ್ರತಿ, ಮತ್ತು ಮೊಬೈಲ್ ನ್ನು ತರುವಂತೆ ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಬೇಬಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.