ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಎನ್.ಎಸ್.ಎಸ್. ಘಟಕವು ವಿಶ್ವ ಆರೋಗ್ಯ ದಿನದ ಪ್ರಯುಕ್ತ ಎ. 07 ರಂದು “ FIT RGUHS FOR FIT INDIA” ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಯಿತ್ತು.
ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅವರು ಆರೋಗ್ಯದ ಬಗ್ಗೆ ಮಾಹಿತಿ ಹಾಗೂ ವಿಶೇಷ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ. ಯವರು ಆರೋಗ್ಯದ ಮತ್ತು ಧೈನಂದಿನ ಜೀವನದಲ್ಲಿ ವ್ಯಾಯಾಮದ ಮಹತ್ವವನ್ನು ತಿಳಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಗೌರಿ ಪಾರ್ವತಿ ಮತ್ತು ಸೂರ್ಯಪ್ರಿಯ ಪ್ರಾರ್ಥನೆ ಹಾಡಿದರು. ರಾಜಲಕ್ಷ್ಮಿ ಪೈ ಸ್ವಾಗತಿಸಿ, ಎನ್. ಎಸ್. ಎಸ್. ಘಟಕದ ಅಧಿಕಾರಿ ಡಾ. ಪ್ರಮೋದ ಪಿ. ಎ. ವಂದಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ವರ್ಗದವರು, ಸ್ನಾತಕೋತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು ಹಾಗೂ ಎನ್.ಎಸ್.ಎಸ್. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.