ಪಂಜ ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ಮುಂಜಾಗ್ರತಾ ಸಭೆ

Advt_Headding_Middle
Advt_Headding_Middle

 

ಪಂಜ ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ಮುಂಜಾಗ್ರತಾ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ವೈಯವರ ಅಧ್ಯಕ್ಷತೆಯಲ್ಲಿ ಎ.20 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ.ಮಂಜುನಾಥ ರವರು ಕೊರೊನಾ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಿ 45 ವರ್ಷ ಮೇಲ್ಪಟ್ಟ ಎಲ್ಲರೂ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳುವಂತೆ ಸಲಹೆ ನೀಡಿದರು.
ಪರವೂರಿನಿಂದ ಊರಿಗೆ ಬರುವವರ ಬಗ್ಗೆ ಹೆಚ್ಚು ನಿಗಾ ವಹಿಸುವಂತೆ ಹೇಳಿದರು.
ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಹಾಕುವಂತೆ ಅಲ್ಲದೇ ಅಂಗಡಿಗಳಲ್ಲಿ ಗ್ರಾಹಕರು ಹೆಚ್ಚು ಹೊತ್ತು ನಿಲ್ಲದಂತೆ ದಿನಸಿ ಸಾಮಾಗ್ರಿಗಳನ್ನು ಖರೀದಿಸುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹೇಳಿದರು.
ಈಗಾಗಲೇ ಐವತ್ತೊಕ್ಕು ಮತ್ತು ಕೂತ್ಕುಂಜ ಗ್ರಾಮದಲ್ಲಿ ಪಾಸಿಟಿವ್ ಕೇಸುಗಳಿದ್ದು ಆದಷ್ಟು ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಣಿಯಾನ ಪುರುಷೋತ್ತಮರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಕೊರೊನಾ ಜಾಗೃತಿಯ ಮೊದಲ ಹಂತದಲ್ಲಿ ಪೇಟೆಯಲ್ಲಿ ಮೈಕ್ ಮುಖಾಂತರ ಜಾಗೃತಿಗೊಳಿಸಲಾಗುವುದು ಎಂದು ಹೇಳಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ ಉಪಸ್ಥಿತರಿದ್ದರು.
ಸಭೆಯಲ್ಲಿ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು,ಪೊಲೀಸ್ ಇಲಾಖೆಯವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ಸಲಹೆಗಳನ್ನು ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.