ತಾಲೂಕಿನಲ್ಲಿ 105  ಕೊರೋನಾ ಸಕ್ರಿಯ ಪ್ರಕರಣಗಳು

Advt_Headding_Middle
Advt_Headding_Middle

ಸುಳ್ಯ ನಗರದಲ್ಲಿ 17  ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸುಳ್ಯ ತಾಲೂಕಿನಲ್ಲಿ ೧೦೫ ಸಕ್ರಿಯ ಪ್ರಕರಣಗಳಿವೆ. ಸುಳ್ಯ ನಗರ ವ್ಯಾಪ್ತಿಯಲ್ಲಿ 17 ಮಂದಿಗೆ ಪಾಸಿಟಿವ್ ಇರುವುದು ಗೊತ್ತಾಗಿದೆ. ತಾಲೂಕು ಆಸ್ಪತ್ರೆಯಲ್ಲಿ ಮೂರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, ಕೊರೋನಾ ಪಾಸಿಟಿವ್ ಬಂದು ಲಕ್ಷಣಗಳಿಲ್ಲದವರು ಹೋಂ ಐಸೋಲೇಶನ್ ಆಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ಒಂದು ವಾರದಲ್ಲಿ ೧೭ ಮಂದಿಗೆ ಪಾಸಿಟಿವ್ ಇರುವುದು ಗೊತ್ತಾಗಿದೆ.

ಸಾರ್ವಜನಿಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು, ಸಾಮಾಜಿಕ ಅಂತರ ಪಾಲಿಸಬೇಕು, ಜ್ವರ, ಶೀತ, ತಲೆನೋವು ಮೊದಲಾದ ಲಕ್ಷಣಗಳಿದ್ದರೆ ನಿರ್ಲಕ್ಷ್ಯ ಮಾಡಬಾರದು. ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆ ನಡೆಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ವಿನಂತಿಸಿದ್ದಾರೆ. ಕೊರೋನಾ ಪಾಸಿಟಿವ್ ಬಂದು ಹೋಂ ಐಸೋಲೇಶನ್ ಇರುವವರ ಬಗ್ಗೆ ನಮ್ಮ ವೈದ್ಯರುಗಳು ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ನಿರಂತರ ಅವರ ಸಂಪರ್ಕದಲ್ಲಿದ್ದಾರೆ. ಅವರ ಆರೋಗ್ಯವನ್ನು ಪ್ರತಿದಿನ ವಿಚಾರಿಸುತ್ತಿದ್ದೇವೆ ಎಂದು ಅವರು ಸುದ್ದಿಗೆ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.