Breaking News

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಕ್ಷಯ ತದಿಗೆ ಅಂಗವಾಗಿ ವಿಶೇಷ ಪೂಜೆ

Advt_Headding_Middle

 

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಕ್ಷಯ ತದಿಗೆ ಅಂಗವಾಗಿ ವಿಶೇಷ ಪೂಜೆ ನೆರವೇರಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ.20 ರಂದು ಅಕ್ಷಯ ತದಿಗೆ ಉತ್ಸವ ನೆರವೇರಿತು.ಈ ಪ್ರಯುಕ್ತ ಹೊರಾಂಗಣದಲ್ಲಿ ದೇವರ ಪಲ್ಲಕ್ಕಿ ಉತ್ಸವ ನಡೆಯಿತು. ಬಳಿಕ ದ್ವಾದಶಿ ಮಂಟಪದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ನೆರವೇರಿತು. ದೇವಳದ ಅರ್ಚಕ ರಮೇಶ ನೂರಿತ್ತಾಯ ಉತ್ಸವದ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭ ಪುರೋಹಿತರು ಮತ್ತು ಸಿಬ್ಬಂದಿಗಳುಗಳು ಉಪಸ್ಥಿತರಿದ್ದರು.

ದೇಶವ್ಯಾಪ್ತಿ ಹರಡಿರುವ ಕೋವಿಡ್-19 ರ ವೈರಸ್ ನಿರ್ಮೂಲನೆಗಾಗಿ, ಜನತೆಯ ಆರೋಗ್ಯ ಸಮೃದ್ಧಿಗಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಮಹಾಭಿಷೇಕ ನೆರವೇರಿತು. ಶ್ರೀ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ವೈದಿಕ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭ ದೇಶ ಹಾಗೂ ರಾಜ್ಯದ ಜನತೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರು ಆರೋಗ್ಯ ಸಮೃದ್ಧಿಯನ್ನು ಕರುಣಿಸಲಿ ಹಾಗೂ ಕೊರೋನಾ ಸಾಂಕ್ರಾಮಿಕ ರೋಗವು ಲೋಕದಿಂದ ಶೀಘ್ರ ತೊಲಗಿ ಸರ್ವರೂ ಆರೋಗ್ಯವಂತರಾಗಲಿ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಮತ್ತು ನೈವೇದ್ಯ ನೆರವೇರಿತು.
ಈ ಸಂದರ್ಭ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ರಾವ್, ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.