Breaking News

ಜಾಲ್ಸೂರು: ಗ್ರಾಮ ಮಟ್ಟದ ಕೋವಿಡ್-19 ಕಾರ್ಯಪಡೆ ಸಭೆ

Advt_Headding_Middle

ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಟೆಸ್ಟ್ ಕಿಟ್ ವಿತರಣೆ

ಮೇ.24ರಿಂದ ಗ್ರಾ.ಪಂ.ಕಛೇರಿಯಲ್ಲಿ ಸಹಾಯವಾಣಿ ಆರಂಭ

ಜಾಲ್ಸೂರು ಗ್ರಾಮ ಪಂಚಾಯತ್ ಮಟ್ಟದ ಕೋವಿಡ್-19 ಜಾಗೃತ ಕಾರ್ಯಪಡೆಯ ಸಭೆಯು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮೇ.21ರಂದು ನಡೆಯಿತು. ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ.ಬಾಬು ಅಧ್ಯಕ್ಷತೆ ವಹಿಸಿದ್ದರು. ಜಾಲ್ಸೂರು ಗ್ರಾಮದಲ್ಲಿ ಈವರೆಗೆ ಒಟ್ಟು 38 ಪಾಸಿಟಿವ್ ಪ್ರಕರಣಗಳು ಬಂದಿದ್ದು, ಪಾಸಿಟಿವ್ ಬಂದಂತಹ ಮನೆಯವರ ಕೋವಿಡ್ ಪರೀಕ್ಷೆ ನಡೆಸಲು ಗ್ರಾಮ ಪಂಚಾಯತಿ ವತಿಯಿಂದ ಕೊರೊನಾ ಟೆಸ್ಟ್ ಕಿಟ್ ವಿತರಿಸಲಾಯಿತು.

ಜೊತೆಗೆ ಮಾಸ್ಕ್ ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕುರಿತು ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಸಹಾಯಕಿ ಶ್ರೀಮತಿ ಜಲಜ ಅಡ್ಕಾರು, ಗ್ರಾಮದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತಿ ಸದಸ್ಯರುಗಳು, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೋವಿಡ್-19 ಕುರಿತು ಮಾಹಿತಿಗಾಗಿ ಮೇ.24ರಿಂದ ಜಾಲ್ಸೂರು ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಕೋವಿಡ್ ಸಹಾಯವಾಣಿ ಕೇಂದ್ರ ಆರಂಭಿಸಲಾಗುವುದು ಹಾಗೂ ಈ ಸಹಾಯವಾಣಿ ಕೇಂದ್ರದಲ್ಲಿ ಪ್ರತೀ ದಿನ ಗ್ರಾಮ ಮಟ್ಟದ ಕೊರೊನಾ ಕಾರ್ಯಪಡೆಯ ಸದಸ್ಯರು ಹಾಜರಿರಲಿದ್ದಾರೆ ಎಂದು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ‘ಸುದ್ದಿ’ಗೆ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.