ಮೇ. 31: ಬೊಳುಬೈಲು ಸ.ಕಿ.ಪ್ರಾ.ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಕೋಮಲ ಸೇವಾ ನಿವೃತ್ತಿ

Advt_Headding_Middle

 

ಜಾಲ್ಸೂರು ಗ್ರಾಮದ ಬೊಳುಬೈಲು ಸ.ಕಿ.ಪ್ರಾ.ಶಾಲಾ ಮುಖ್ಯ ಶಿಕ್ಷಕಿಯಾಗಿದ್ದ ಶ್ರೀಮತಿ ಕೋಮಲರವರು ಮೇ.31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.
ಕಾಸರಗೋಡು ಜಿಲ್ಲೆಯ ಬೇಡಡ್ಕ ಗ್ರಾಮದ ಕುಂದಂಗೋಳಿಯಲ್ಲಿ ಪ್ರಾಥಮಿಕ ಶಿಕ್ಷಣ, ಬಂದಡ್ಕ ಸ.ಪ್ರೌಢ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದ ನಂತರ ಮಡಿಕೇರಿಯ ಸರಸ್ವತಿ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಶಿಕ್ಷಕ ತರಬೇತಿ ಪಡೆದ ಇವರು ಆರಂಭದಲ್ಲಿ ಸ.ಹಿ.ಪ್ರಾ.ಶಾಲೆ ಕೇರ್ಪಳ, ಸ.ಹಿ.ಪ್ರಾ.ಶಾಲೆ ಗಾಂಧಿನಗರ, ಸ್ನೇಹ ಪ್ರಾಥಮಿಕ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು.

 

1999ರಲ್ಲಿ ಸರಕಾರಿ ಸೇವೆ ಸಲ್ಲಿಸಲು ಆರಂಭಿಸಿದ ಇವರು ಆರಂಭದಲ್ಲಿ ಸ.ಹಿ.ಪ್ರಾ.ಶಾಲೆ ದೇವರಕಾನ ಹಾಗೂ ಸ.ಹಿ.ಪ್ರಾ.ಶಾಲೆ ಆಯ್ಯನಕಟ್ಟೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. 2010ರಿಂದ ಬೊಳುಬೈಲು ಸ.ಕಿ.ಪ್ರಾ.ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆಯಲ್ಲಿದ್ದರು.
ಪ್ರಸುತ್ತ ಕೇರ್ಪಳದಲ್ಲಿ ವಾಸ್ತವ್ಯವಿರುವ ಇವರು, ಭೂ ಮಾಪನ ಇಲಾಖೆಯ ನಿವೃತ್ತ ಉದ್ಯೋಗಿ ದಿ. ಭರತ್‌ರವರ ಪತ್ನಿ. ಪುತ್ರ ವಿನಯಕುಮಾರ ಎಂ.ಟೆಕ್ ಪದವೀಧರರಾಗಿದ್ದು ಪ್ರಸುತ್ತ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಉದ್ಯೋಗಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.