ವೈದ್ಯರ ನಡೆ ಹಳ್ಳಿ ಕಡೆ – ಕೊರೊನಾ ನಿಯಂತ್ರಣಕ್ಕೆ ಸರಕಾರದಿಂದ ಹೊಸ ಕಾನ್ಸೆಪ್ಟ್

Advt_Headding_Middle

 

ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರರಿಂದ ಚಾಲನೆ

ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ವೈದ್ಯರ ನಡೆ ಹಳ್ಳಿ ಕಡೆ ಎಂಬ ಹೊಸ ನಿಯಮವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ಸುಳ್ಯದಲ್ಲಿ ಇಂದು ಚಾನಲೆ ನೀಡಿಲಾಯಿತು. ಮೀನುಗಾರಿಕೆ ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇಂದು ನಗರ ಪ್ರದೇಶದಲ್ಲಿ ಕೊರೋನಾ ಪ್ರಕರಣ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಗ್ರಾಮೀಣ ಮಟ್ಟದಲ್ಲಿ ಪ್ರಕರಣದ ಸಂಖ್ಯೆ ಏರುತ್ತಿದ್ದು, ಅದನ್ನು ಹತೋಟಿಗೆ ತರಲು ಈ ನಿಯಮ ಜಾರಿಗೊಳಿಸಲಾಗಿದ್ದು, ಈ ತಂಡ ಮನೆ ಮನೆಗೆ ಹೋಗಿ ಜನರ ಆರೋಗ್ಯ ತಪಾಸಣೆ ನಡೆಸಲಿದೆ. ಆರೋಗ್ಯ ಸಮಸ್ಯೆ ಇದ್ದವರು ವೈದ್ಯರೊಂದಿಗೆ ಸಮಸ್ಯೆ ಹೇಳಿಕೊಳ್ಳಿ ಎಂದು ಸಚಿವರು ಹೇಳಿದರು. ತಹಶೀಲ್ದಾರ್ ಅನಿತಾಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಆರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಆರು ವೈದ್ಯರ ತಂಡಗಳು ಕೆಲಸ ಮಾಡಲಿವೆ. ಮನೆ ಮನೆಗೆ ಹೋಗಿ ಜ್ವರ ಇನ್ನಿತರ ಸಮಸ್ಯೆ ಇರುವವರಿಗೆ ಸ್ವ್ಯಾಬ್ ಟೆಸ್ಟ್ ಮಾಡಿ ಅಲ್ಲೇ ಚಿಕಿತ್ಸೆ ನೀಡುವ ವ್ಯವಸ್ಥೆ ಎಂದು ಹೇಳಿದರು.
ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ತಾಲೂಕು ಪಂಚಾಯತ್ ಇ.ಒ. ಭವಾನಿಶಂಕರ್, ಕೆವಿಜಿ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲರಾದ ಡಿ.ವಿ.ಲೀಲಾಧರ್, ತಾಲೂಕು ವೈದ್ಯಾಧಿಕಾರಿ ನಂದಕುಮಾರ್, ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಕಂದಾಯ ನಿರೀಕ್ಷಕರಾದ ಕೊರಗಪ್ಪ ಹೆಗ್ಡೆ, ಶಂಕರ್, ವೈದ್ಯರುಗಳು, ಲ್ಯಾಬ್ ಟೆಕ್ನೀಷಿಯನ್‌ಗಳು, ಆಶಾ ಕಾರ್ಯಕರ್ತೆಯರು ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.