Breaking News

ಉಪನ್ಯಾಸಕ ಕೂಡಕಂಡಿ ಉದಯಕುಮಾರ್ ಕೆ.ಎಂ ನಾಳೆ ಸೇವಾ ನಿವೃತ್ತಿ

Advt_Headding_Middle

 

 

ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿದ ಆನೇಕಲ್‌ನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲಭಾಷಾ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಕೂಡಕಂಡಿ ಉದಯಕುಮಾರ್‌ರವರು ಮೇ.೩೧ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.
ಮೇ ೨೮ರಂದು ೧೯೬೧ರಲ್ಲಿ ಮಡಿಕೇರಿಯ ಕೂಡಕಂಡಿ ದಿ.ಮಾದಪ್ಪ ಮತ್ತು ಶ್ರೀಮತಿ ಪಾರ್ವತಿ ದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಇವರು ತಮ್ಮ ಪ್ರಾಥಮಿಕ ಶಿಕ್ಷಣದಿಂದ ಸ್ನಾತಕೋತ್ತರ ಪದವಿಯ ವರೆಗೂ ಬೆಂಗಳೂರಿನಲ್ಲಿಯೇ ಪಡೆದಿರುತ್ತಾರೆ. ೧೯೮೫ರಲ್ಲಿ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಾಗಿ ಸರ್ಕಾರಿ ಪದವಿಪೂರ್ವ ಕಾಲೇಜು ಆನೇಕಲ್‌ನಲ್ಲಿ ಸರ್ಕಾರಿ ಸೇವೆ ಆರಂಭಿಸಿದ ಇವರು ೧೯ ವರ್ಷಗಳ ಕಾಲ ಪ್ರೌಢಶಾಲಾ ಶಿಕ್ಷಕನಾಗಿ ಕಾರ್ಯನಿರ್ವಹಿಸಿ ೨೦೦೬ರಲ್ಲಿ ಬಡ್ತಿ ಹೊಂದಿ ಆನೇಕಲ್ ಪದವಿಪೂರ್ವ ಕಾಲೇಜಿನಲ್ಲಿಯೇ ೧೫ ವರ್ಷ ಕಾರ್ಯನಿರ್ವಹಿಸಿದ್ದರು. ಒಟ್ಟು ೩೫ ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಇಂದು ನಿವೃತ್ತಿ ಹೊಂದಲಿದ್ದಾರೆ. ಇವರು ತಮ್ಮ ಸೇವಾವಧಿಯಲ್ಲಿ ೫ ವರ್ಷಗಳ ಕಾಲ ಆನೇಕಲ್ ತಾಲೂಕು ಸರ್ಕಾರಿ ನೌಕರರ ಸಂಘದಲ್ಲಿ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ಪ್ರಸುತ್ತ ಆನೆಕಲ್‌ನಲ್ಲಿ ನೆಲೆಸಿರುವ ಇವರು, ಪತ್ನಿ ಶ್ರೀಮತಿ ಗೀತಾರವರು ಪ್ರೌಢಶಾಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪುತ್ರಿ ಚಂದನಾ ಬೆಂಗಳೂರಿನ ಪಿ.ಇ.ಎಸ್ ಯೂನಿವರ್ಸಿಟಿಯಲ್ಲಿ ಬಿ.ಟೆಕ್ ಕಂಪ್ಯೂಟರ್ ಸೈನ್ಸ್ ೬ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ದ್ವೀತಿಯ ಪುತ್ರಿ ಶ್ರೇಯಾ ೧೦ನೇ ತರಗತಿ ವಿದ್ಯಾರ್ಥಿನಿ. ಇವರು ಮೂಲತಃ ಸುಳ್ಯ ತಾಲೂಕಿನ ಕಲ್ಲುಗುಂಡಿ ನಿವಾಸಿ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.