ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಆರೋಪ: ಬಂಧನ, ಬಿಡುಗಡೆ

Advt_Headding_Middle

ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ದುರ್ಗಾವಾಹಿನಿ ಸಂಘಟನೆಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ರವಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದ ಸುಳ್ಯದ ಯುವಕ ಸೇರಿದಂತೆ ನಾಲ್ವರನ್ನು ಸ್ಟೇಷನ್ ಜಾಮೀನಿನಲ್ಲಿ ಬಿಡುಗಡೆಗೊಳಿಸಿರುವುದಾಗಿ ತಿಳಿದುಬಂದಿದೆ.


ವಿಚಾರಣೆಗಾಗಿ ನಿನ್ನೆ ವಶಕ್ಕೆ ಪಡೆದಿದ್ದ ದುಗ್ಗಲಡ್ಕದ ಭವಾನಿ ಶಂಕರ್ ಕಲ್ಮಡ್ಕ, ಬಜಾಲ್ ನ ನೌಶಾದ್, ಕಾವೂರಿನ ರವಿ ಎಲಿಯಾಸ್ ಟಿಕ್ಕಿ ರವಿ, ಮೂಡಿಬಿದಿರೆಯ ಧರೆಗುಡ್ಡೆಯ ಜಯ ಕುಮಾರ್ ಎಂಬವರನ್ನು ಬಂಧಿಸಿ ರಾತ್ರಿಯೇ ಸ್ಟೇಷನ್ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಯಿತೆಂದು ತಿಳಿದುಬಂದಿದೆ.
ಇವರು ಶರಣ್ ಪಂಪ್‌ವೆಲ್ ಮತ್ತು ದುರ್ಗಾವಾಹಿನಿಗೆ ಸಂಬಂಧಿಸಿದಂತೆ ಬಂದ ವಾಟ್ಸಾಪ್ ಸಂದೇಶವನ್ನು ಇತರ ಗ್ರೂಪ್ ಹಾಗೂ ಸ್ನೇಹಿತರಿಗೆ ರವಾನಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಸಂದೇಶದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಂಗಳೂರು ಸಿಟಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.