ತೊಡಿಕಾನ : ಇನ್ನರ್ ವೀಲ್ ಕ್ಲಬ್ ಸುಳ್ಯ ವತಿಯಿಂದ ಸಾನಿಟೈಸೇಷನ್

Advt_Headding_Middle

ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಡ್ಕ ಸಿಆರ್‌ಸಿ ಕಾಲೊನಿಯಲ್ಲಿ ಅತೀ ಹೆಚ್ಚು ಕೊರೋನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಾಲೋನಿಯನ್ನು ಸೀಲ್ ಡೌನ್ ಮಾಡಲಾಗಿದ್ದು ಇನ್ನರ್ ವೀಲ್ ಕ್ಲಬ್ ಸುಳ್ಯ ವತಿಯಿಂದ ಸಾನಿಟೈಸೇಷನ್ ಮಾಡಲಾಯಿತು.

ಈ ಸಂದರ್ಭದಲ್ಲಿ ಇನ್ನರ್‌ವೀಲ್ ಕ್ಲಬ್‌ನ ನಿಯೋಜಿತ ಅಧ್ಯಕ್ಷೆ ಪೂಜಾ ಸಂತೋಷ್, ತಾಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್, ರಬ್ಬರ್ ಅಭಿವೃದ್ಧಿ ನಿಗಮದ ರಂಗನಾಥ್, ಜಿಲ್ಲಾ ಕೋವಿಡ್ ನಿಯಂತ್ರಣಾಧಿಕಾರಿ ಡಾ. ಅಶೋಕ್ ಕುಮಾರ್, ಜಿಲ್ಲಾ ವೈದ್ಯಧಿಕಾರಿ ಡಾ.ರಮೇಶ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಿಜ್ವಾನ್, ಆರಂತೋಡು -ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಪಂಚಾಯತ್ ಸದಸ್ಯರುಗಳಾದ ವೆಂಕಟ್ರಮಣ ಪೆತ್ತಾಜೆ, ಭವಾನಿ ಚಿಟ್ಟನ್ನೂರ್, ಶಿವಾನಂದ ಕುಕ್ಕುಂಬಳ್ಳ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶಂಕರ್ ಲಿಂಗಮ್, ಅರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು, ಟಾಸ್ಕ್ ಫೋರ್ಸ್ ನ ಸದಸ್ಯರು ಉಪಸ್ಥಿತರಿದ್ದರು.

 ಕ್ಲಬ್ ನ ಸೇವಾ ಕಾರ್ಯ ವನ್ನು ಅರೋಗ್ಯ ಇಲಾಖೆಯ ಮತ್ತು ಕೆ.ಎಫ್.ಡಿ.ಸಿ.ಅಧಿಕಾರಿಗಳು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಕ್ಲಬ್ ನ ವತಿಯಿಂದ ಕಂಟ್ಯನ್ಮೆಂಟ್ ಜೋನ್ ನಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ ಕೋವಿಡ್ ಸೇಫ್ಟಿ ಕಿಟ್ ವಿತರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.