ಲಾಕ್ ಡೌನ್ ಆದೇಶದಲ್ಲಿ ಕೊಡಗಿಗೆ ವಿನಾಯಿತಿ

Advt_Headding_Middle

 

ಕೆಲವು ಅಂಗಡಿಗಳಿಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವೆರೆಗೆ ವ್ಯಾಪಾರಕ್ಕೆ ಅನುಮತಿ

ಸಾರ್ವಜನಿಕರು ನಿಗಧಿತ ಅವಧಿಯಲ್ಲಿ ದೈನಂದಿನ ಅಗತ್ಯ ವಸ್ತಗಳ ಖರೀದಿ, ಬ್ಯಾಂಕಿಂಗ್ ಕಾರ್ಯ, ಮುಂಗಾರು ಪೂರ್ವ ಚಟುವಟಿಕೆ, ಮೂಲ ಸೌಲಭ್ಯಗಳ ನಿರ್ಮಾಣ ಚಟುವಟಿಕೆ ಇತ್ಯಾದಿಗಳಿಗೆ ಅನುಕೂಲವಾಗುವಂತೆ ಹಾಗೂ ಕೆಲ ಗ್ರಾಮೀಣ ಭಾಗಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಇರುವ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಈ ಕೆಳಕಂಡ ಹೆಚ್ಚುವರಿ ಅಂಶಗಳನ್ನು ಸೇರ್ಪಡೆಗೊಳಿಸಿ ಜೂ. ೭ರ ಬೆಳಗ್ಗೆ ೬ ಗಂಟೆಯಿಂದ ದಿನಾಂಕ ೧೪ ಬೆಳಗ್ಗೆ ೬: ಗಂಟೆಯವರೆಗೆ ಜಾರಿಯಲ್ಲಿರುವಂತೆ ಕೆಲವು ನಿರ್ಬಂಧ / ವಿನಾಯಿತಿಗಳಿರುವ ಲಾಕ್ಡೌನ್ ಆದೇಶವನ್ನು ಹೊರಡಿಸಲಾಗಿದೆ.
ಅತ್ಯವಶ್ಯಕ ಸೇವೆಗಳಡಿ ಬರುವ ತರಕಾರಿ, ಹಣ್ಣು-ಹಂಪಲು, ದಿನಸಿ, ಕೃಷಿಗೆ ಸಂಬಂಧಿಸಿದ ಅಂಗಡಿ ಮಳಿಗೆ ಮತ್ತು ದಾಸ್ತಾನು ಕೇಂದ್ರಗಳು, ಮೀನು ಮತ್ತು ಮಾಂಸದ ಮಳಿಗೆಗಳನ್ನು, ಹಾಪ್ ಕಾಮ್ಸ್ ಮಳಿಗೆಗಳನ್ನು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 6. ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ.
ಕೃಷಿ ಪರಿಕರವಾದ ರಸಗೊಬ್ಬರವನ್ನು ರೈತರು ಈಗಾಗಲೇ ನಿಗದಿಪಡಿಸಿರುವ ದಿನಗಳಲ್ಲಿ (ಸೋಮವಾರ, ಬುಧವಾರ ಮತ್ತು ಶುಕ್ರವಾರ) ನಿಗದಿಪಡಿಸಿದ ಸಮಯದಲ್ಲಿ (ಬೆಳಿಗ್ಗೆ 6. ರಿಂದ ಮಧ್ಯಾಹ್ನ 1.೦೦ ಗಂಟೆಯವರೆಗೆ ಮಾತ್ರ) ರಸೀದಿ ಪಡೆದು ಖರೀದಿಸಲು ಹಾಗೂ ಖರೀದಿಸಿದ ಸ್ಥಳದಿಂದ ರೈತರ ಕೃಷಿ ಚಟುವಟಿಕೆಯ ಸ್ಥಳಕ್ಕೆ ಅದೇ ದಿನದಂದು ಸಾಗಿಸಲು ಅವಕಾಶ ಕಲ್ಪಿಸಲಾಗಿದೆ. ಸಾಗಾಣಿಕೆ ಸಮಯದಲ್ಲಿ ಅಧಿಕೃತ ರಶೀದಿಯನ್ನು ಹೊಂದಿರತಕ್ಕದ್ದು.
ಜಿಲ್ಲೆಯ ಸಾರ್ವಜನಿಕರಿಗೆ ಮಳೆಗಾಲಕ್ಕೆ ಮತ್ತು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರೈನ್ಕೋಟ್, ಛತ್ರಿ, ಟಾರ್ಪಲ್ಗಳು, ಬಟ್ಟೆ ಬರೆ, ಚಪ್ಪಲಿ, ಗಂಬೂಟು ಮುಂತಾದ ವಸ್ತುಗಳ ಅವಶ್ಯಕತೆ ಇರುವುದರಿಂದ ಇಂತಹ ವಸ್ತುಗಳ ಮಾರಾಟ ಮಳಿಗೆಯನ್ನು ತೆರೆಯಲು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 6. ಗಂಟೆಯಿಂದ ಮಧ್ಯಾಹ್ನ 1. ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಿದೆ.
ಪಡಿತರ ನ್ಯಾಯಬೆಲೆ ಮಳಿಗೆಗಳು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಮಾತ್ರ ತೆರೆಯಲು ಅನುಮತಿಸಿದೆ.
ಸ್ಟಾಂಡ್ ಅಲೋನ್ ಹಾಲಿನ ಬೂತ್ ಗಳು, ದಿನಪತ್ರಿಕೆಗಳ ಸೆಗ್ರಿಗೇಷನ್ ಮತ್ತು ವಿತರಣೆಗೆ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಬೆಳಗ್ಗೆ 1೦ ಗಂಟೆಯವರೆಗೆ ಅನುಮತಿಸಿದೆ.
ಆಸ್ಪತ್ರೆ, ಔಷಧಾಲಯ, ವೈದ್ಯಕೀಯ ಸೇವೆಗಳು, ಪೆಟ್ರೋಲ್ ಬಂಕ್ ಗಳು, ಎಲ್.ಪಿ.ಜಿ ಕೇಂದ್ರಗಳ ೨೪x೭ ಕಾರ್ಯಚಟುವಟಿಕೆಗೆ ಅನುಮತಿಸಲಾಗಿದೆ.
ಹೋಟೆಲ್ / ರೆಸ್ಟೋರೆಂಟ್ ಗಳಿಂದ ಆಹಾರವನ್ನು ಟೇಕ್ ಅವೆ (ಪಾರ್ಸಲ್) ರೂಪದಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ ೬ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಪಡೆಯಲು ಅನುಮತಿಸಿದೆ.
ಸ್ಟಾಂಡ್ ಅಲೋನ್, ಸಿಎಲ್-2, ಸಿಎಲ್-8, ಸಿಎಲ್-8ಎ, ಸಿಎಲ್-8ಬಿ, ಸಿಎಲ್-11ಸಿ, ಸಿಎಲ್-16, ಸಿಎಲ್-6ಎ, ಸಿಎಲ್-7, ಸಿಎಲ್-7ಎ, ಸಿಎಲ್-೭ಬಿ, ಸಿಎಲ್-9, ಸಿಎಲ್-17, ಸಿಎಲ್-18, ವೈನ್ ಬೋಟಿಕ್ ಸನ್ನದುಗಳಲ್ಲಿ, ಬಾಟಲ್ಡ್ ಬಿಯರ್ ಮತ್ತು ವೈನ್ ಟವರಿನ್ ಸನ್ನದುಗಳಿಂದ ಟೇಕ್ ಅವೆ ರೂಪದಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಅನುಮತಿಸಿದೆ.
ಜಿಲ್ಲೆಗೆ ಆಗಮಿಸುವವರನ್ನು ಪ್ರತೀ ಚೆಕ್ ಪೋಸ್ಟ್ ಗಳಲ್ಲಿ ವಿಚಾರಣೆ ನಡೆಸಿ, ಕೊಡಗು ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಪಡೆದುಕೊಳ್ಳುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿ ಇರತಕ್ಕದ್ದು.
ರಾಜ್ಯ ಸರ್ಕಾರದ ಮತ್ತು ಅದರ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಇತ್ಯಾದಿಗಳ ಅಧಿಕಾರಿ / ಸಿಬ್ಬಂದಿಗಳ ಕರ್ತವ್ಯದ ನಿಮಿತ್ತ ಹಾಗೂ ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಅಧಿಕಾರಿ / ನೌಕರರ ಸಂಚಾರಕ್ಕೆ ಅವಕಾಶ ಇರುತ್ತದೆ. ಆದಾಗ್ಯೂ ಸಹ ಸದರಿಯವರು ಆಯಾ ಕಚೇರಿಯಿಂದ ನೀಡಲ್ಪಟ್ಟ ಅಧಿಕೃತ ಗುರುತಿನ ಚೀಟಿ ಹೊಂದಿರತಕ್ಕದ್ದು ಮತ್ತು ಪರಿಶೀಲನೆ ವೇಳೆ ಹಾಜರುಪಡಿಸತಕ್ಕದ್ದು.
ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿಗಳು ಸಕಾರಣವಿಲ್ಲದೆ ಅನಗತ್ಯ ಸಂಚರಿಸುವುದು / ತಿರುಗಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಈ ಆದೇಶದ ದುರುಪಯೋಗ ಅಥವಾ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ 188, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ 2020, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ ೨೦೦೫ರಡಿ ಮತ್ತು ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪರಿಷ್ಕೃತ ಆದೇಶದಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.