Breaking News

ಪಂಜ :ಸಹಕಾರ ಸಂಘದ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ-ಛತ್ರಿ ವಿತರಣೆ

Advt_Headding_Middle

 

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ-ಛತ್ರಿ ವಿತರಣೆ ಕಾರ್ಯಕ್ರಮ ಸಂಘದ ಕಲ್ಲೇಗ ಪೂವಣಿ ಹೆಗ್ಡೆ ಸಭಾಭವನದಲ್ಲಿ ಜೂ.11 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಬ್ರಮಣ್ಯ ಕುಳ ವಹಿಸಿದ್ದರು.ಉಪಾಧ್ಯಕ್ಷ ಲಿಗೋಧರ ಆಚಾರ್ಯ, ನಿರ್ದೇಶಕ ಚಂದ್ರಶೇಖರ ಶಾಸ್ತ್ರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೊರೋನಾ ಸಂಕಷ್ಟ ಕಾಲದಲ್ಲಿ ಆಶಾ ಕಾರ್ಯಕರ್ತೆಯರ ಸೇವೆಯನ್ನು ಗುರುತಿಸಿ ಸಂಘದ ವತಿಯಿಂದ ಗೌರವಧನ ಚೆಕ್ ಹಾಗೂ ಛತ್ರಿ ನೀಡಿ ಗೌರವಿಸಲಾಯಿತು.ಸಂಘದ ನಿರ್ದೇಶಕರಾದ ಶ್ರೀಕೃಷ್ಣ ಭಟ್ ಪಟೋಳಿ, ರಘುನಾಥ ರೈ ಕೆರೆಕ್ಕೋಡಿ, ವಾಚಣ್ಣ ಕೆರೆಮೂಲೆ, ನಿಕಟಪೂರ್ವ ಉಪಾಧ್ಯಕ್ಷ ಲೋಕೇಶ್ ಬರೆಮೇಲು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸತ್ಯದೀಪ್ ಸಂಪ ಸ್ವಾಗತಿಸಿದರು ಮತ್ತು ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.