Breaking News

ವಿಶೇಷ ಚೇತನ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಕಿಟ್ ವಿತರಣೆ

Advt_Headding_Middle

 

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಹಾಗೂ ಎಂ ಬಿ ಫೌಂಡೇಶನ್ ಇದರ ಆಶ್ರಯದಲ್ಲಿ ಸಾಂದೀಪ ವಿಶೇಷಮಕ್ಕಳ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಆಹಾರ ಕಿಟ್ ಮತ್ತು ಶಾಲಾ ಸಮವಸ್ತ್ರ ವಿತರಣಾ ಕಾರ್ಯಕ್ರಮ ಎಂ ಬಿ ಕಾಂಪೌಂಡ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸಾಂದೀಪ ಶಾಲೆಯ ನೂತನ ಕಟ್ಟಡದಲ್ಲಿ ಅ.31ರಂದು ನಡೆಯಿತು.
75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ವಿಶೇಷ ಚೇತನ ಮಕ್ಕಳಿಗೆ ಏರ್ಪಡಿಸಿದ್ದ ರಾಷ್ಟ್ರಧ್ವಜ ಬಿಡುಸುವ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ವಿತರಿಸಿದರು ರಾಷ್ಟ್ರಧ್ವಜದ ಚಿತ್ರ ಬಿಡಿಸಿದ ವಿಶೇಷ ಚೇತನ ಮಕ್ಕಳನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಎಂ ಬಿ ಫೌಂಡೇಶನ್ ಅಧ್ಯಕ್ಷ ಎಂ ಬಿ ಸದಾಶಿವ ಸಾಂದೀಪ ಶಾಲೆಯ ಮತ್ತು ವಿಶೇಷ ಮಕ್ಕಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಪ್ರಜ್ಞಾ ವಿಶೇಷ ಚೇತನ ಮಕ್ಕಳಿಗೆ ಮತ್ತು ಮಕ್ಕಳ ಪೋಷಕರಿಗೆ ತರಭೇತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಅನ್ಸಾರಿಯ ಎಜುಕೇಶನ್ ಸೆಂಟರ್ ಕಾರ್ಯದರ್ಶಿ ಲತೀಫ್ ಹರ್ಲಡ್ಕ,ಸುದ್ದಿ ಬಿಡುಗಡೆ ಪತ್ರಿಕೆ ಕಛೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ ಮಕ್ಕಳಿಗೆ ಆಹಾರ ಕಿಟ್ ವಿತರಿಸಿದರು.
ಸಾಂದೀಪ ಶಾಲೆ ಸಂಚಾಲಕಿ ಹರಿಣಿ ಸದಾಶಿವ ಮಕ್ಕಳಿಗೆ ಸಮವಸ್ತ್ರ ವಿತರಿಸಿದರು.
ಇದೇ ಸಂದರ್ಭದಲ್ಲಿ ಸಜ್ಜನ ಪ್ರತಿಷ್ಠಾನ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ಮತ್ತು ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಕಿರ್ತಿ ನರಿಯೂರ ವರಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ ಸಾಂದೀಪ ಶಾಲೆ ಶಿಕ್ಷಕಿ ಸೌಮ್ಯ ವಂದಿಸಿದರೂ. ಮಧುಕೃಷ್ಣ ಬೆಟ್ಟ,ಸಾಂದೀಪ ವಿಶೇಷ ಮಕ್ಕಳ ಶಾಲಾ ಅಧ್ಯಾಪಕ ವೃಂದ ಕಾರ್ಯಕ್ರಮದಲ್ಲಿ ಸಹಕರಿಸಿದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.