ಇಂದ್ರಾಜೆ ಸ.ಕಿ.ಪ್ರಾ. ಶಾಲೆಯಲ್ಲಿ ವಿದಾಯ ಮತ್ತು ಬೀಳ್ಕೊಡುಗೆ

Advt_Headding_Middle

 

ಇಂದ್ರಾಜೆ ಸ.ಕಿ.ಪ್ರಾ. ಶಾಲೆಯಲ್ಲಿ ನಿವೃತ್ತರಾದ ಒಬ್ಬರಿಗೆ ಮತ್ತು ವರ್ಗಾವಣೆಗೊಂಡ ಮೂವರಿಗೆ ಬೀಳ್ಕೋಡುಗೆ ಕಾರ್ಯಕ್ರಮ ಸೆ. 1ರಂದು ನಡೆಯಿತು
ಇಂದ್ರಾಜೆ ಸ.ಕಿ.ಪ್ರಾ. ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಚೂರಿಪದವು ಸ.ಕಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡ ಶ್ರೀಮತಿ ಐರಿನ್ ಕ್ರಾಸ್ತಾ, ಇಂದ್ರಾಜೆ ಅಂಗನವಾಡಿ ಕೇಂದ್ರದಿಂದ ಕೊಡಿಯಾಲದ ಬಾಚೋಡಿ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆಗೊಂಡ ಶ್ರೀಮತಿ ಸುಂದರಿ, ಬಾಳಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಕೊಡಿಯಾಲ ಗ್ರಾ.ಪಂ.ಗೆ ವರ್ಗಾವಣೆಗೊಂಡ ಶ್ರೀಮತಿ ಚಂದ್ರಾವತಿಯವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಇಂದ್ರಾಜೆ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀಮತಿ ಭವಾನಿಯವರಿಗೆ ವಿದಾಯ ಸಮಾರಂಭ ಸೆ. 1ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಗಾಯತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆ, ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ್, ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಅಧ್ಯಕ್ಷೆ ಶ್ರೀಮತಿ ಸವಿತಾ ಚಾಕೊಟೆಡ್ಕ, ಸದಸ್ಯರಾದ ಹರ್ಷ ಭಟ್ ಜೋಗಿಬೆಟ್ಟು, ಶ್ರೀಮತಿ ಪಾವನ, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು, ನಿರ್ದೇಶಕಿ ಶ್ರೀಮತಿ ಪಂಕಜಾಕ್ಷಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಪಿ. ಶೇಖರ್, ಇಂದ್ರಾಜೆ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಭುವನೇಶ್ವರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಾಳಿಲ ಗ್ರಾ.ಪಂ. ಮಾಜಿ ಸದಸ್ಯೆ ಶ್ರೀಮತಿ ಲಲಿತಾ ಮುಗುಪ್ಪು ಅಭಿನಂದನಾ ಮಾತುಗಳನ್ನಾಡಿದರು. ಶಾಲಾ ಶಿಕ್ಷಕಿ ಶ್ರೀಮತಿ ಸುವರ್ಣ ಚಂದ್ರಿಕಾ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ ವಂದಿಸಿದರು. ಶಾಲಾ ಪೋಷಕರು ಪ್ರಾರ್ಥಿಸಿದರು. ಶ್ರೀಮತಿ ಮಧುಶ್ರೀ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಅನಿತಾ, ಶ್ರೀಮತಿ ಭವ್ಯ ಕಾಯಾರ, ಭುವನೇಶ್ವರಿ, ಶಿವರಾಮ ಸನ್ಮಾನ ಪತ್ರ ವಾಚಿಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದತ್ತಿನಿಧಿಯನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಿ.ಡಿ.ಪಿ.ಒ. ಶ್ರೀಮತಿ ರಶ್ಮಿ ಮಾತೃವಂದನಾ ಯೋಜನೆಯ ಮಾಹಿತಿ ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.