Breaking News

ಬೆಳ್ಳಾರೆಯಲ್ಲಿ ಗುರುನಮನ ಕಾರ್ಯಕ್ರಮ ಮತ್ತು ವಿಚಾರ ಸಂಕಿರಣ

Advt_Headding_Middle

ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ ಸ್ವಾತಂತ್ರ್ಯ ಸಂಭ್ರಮದ ಅಮೃತ ಮಹೋತ್ಸವದ ಪ್ರಯುಕ್ತ ಶಿಕ್ಷಕ ದಿನಾಚರಣೆಯ ಅಂಗವಾಗಿ ಗುರುನಮನ ಕಾರ್ಯಕ್ರಮ ಮತ್ತು ವಿಚಾರ ಸಂಕಿರಣವು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಥಮಿಕ ವಿಭಾಗದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ ಉದ್ಘಾಟಿಸಿದರು. ಸ್ನೇಹಿತರ ಕಲಾಸಂಘದ ಅಧ್ಯಕ್ಷ ಸಂಜಯ್ ನೆಟ್ಟಾರು ಅಧ್ಯಕ್ಷತೆ ವಹಿಸಿದ್ದರು. ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್‌ಕೆರೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗುರುನಮನ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಬೆಳ್ಳಾರೆಯ ೨೦ ಮಂದಿ ಶಿಕ್ಷಕರನ್ನು ಗೌರವಿಸಲಾಯಿತು.
ಯುವ ಸಾಹಿತಿ ಉದಯಭಾಸ್ಕರ್ ಸುಳ್ಯ, ಶಿಕ್ಷಣ ಮತ್ತು ಸಾಹಿತ್ಯ ವಿಚಾರವಾಗಿ ಉಪನ್ಯಾಸ ನೆರವೇರಿಸಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೇಶವ ನಾಯಕ್ ಮೂಡಾಯಿತೋಟ ಮತ್ತು ಪದವೀಧರೇತರ ಮುಖ್ಯಗುರು ಜಿ.ಮಾಯಿಲಪ್ಪ ಉಪಸ್ಥಿತರಿದ್ದರು.
ಸ್ನೇಹಿತರ ಕಲಾಸಂಘದ ಚಂದ್ರಹಾಸ ಮಣಿಯಾಣಿ ಪಡ್ಪು ಸ್ವಾಗತಿಸಿ, ಕೊರಗಪ್ಪ ಕುರುಂಬುಡೇಲು ವಂದಿಸಿದರು. ತನುಶ್ರೀ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.