ಕೆ.ವಿ.ಜಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಸನ್ಮಾನ ಹಾಗೂ ವಿದಾಯ ಸಮಾರಂಭ

Advt_Headding_Middle

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರೊಫೆಸರ್ ಹಾಗೂ ವಿದ್ಯಾರ್ಥಿ-ಕ್ಷೇಮಾಧಿಕಾರಿಯಾಗಿ ಕಳೆದ 32 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ರಾಮು ಎಸ್. ಹಾಗೂ ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನಲ್ಲಿ ಅಧ್ಯಾಪಿಕೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ಮಮತ ಅವರಿಗೆ ಸನ್ಮಾನ ಹಾಗೂ ವಿದಾಯ ಸಮಾರಂಭ ಸೆ.04 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಎನ್.ಎ. ಜ್ಞಾನೇಶ್ ಹಾಗೂ ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋದಾ ರಾಮಚಂದ್ರ ಅವರನ್ನು ಶಾಲು ಹೊದಿಸಿ ಫಲಪುಷ್ಪ ಹಾಗೂ ಸ್ಮರಣಿಕೆಯನ್ನಿತ್ತು ಸನ್ಮಾನಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಕೆ.ವಿ. ಯವರು ಡಾ. ರಾಮು ಎಸ್. ಮತ್ತು ಶ್ರೀಮತಿ ಮಮತಾ ಇವರಿಗೆ ಶುಭ ಕೋರಿ ಹಾರೈಸಿದ ಸಂದೇಶವನ್ನು ವಾಚಿಸಿದರು. ವಿ.ಟಿ.ಯು. ವಿಶ್ವವಿದ್ಯಾಲಯದ ಮಂಗಳೂರು ವಿಭಾಗದ ವಿಶೇಷಾಧಿಕಾರಿಯಾಗಿರುವ ಡಾ. ಶಿವಕುಮಾರ್ ಹೆಚ್. ಆರ್. ಅವರು ಅಭಿನಂದನಾ ಭಾಷಣದಲ್ಲಿ ಡಾ. ರಾಮು ಎಸ್. ಅವರ ಹಳೆಯ ನೆನಪುಗಳನ್ನು ಹಂಚಿಕೊಂಡರು. ಪ್ರೊ. ಅರುಣ್ ಕುಮಾರ್ ಹೆಚ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಇವರು ಡಾ. ರಾಮು ಎಸ್. ಅವರ ಅಭಿನಂದನಾ ಪತ್ರವನ್ನು ವಾಚಿಸಿದರು. ತದನಂತರ ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋದಾ ರಾಮಚಂದ್ರ ಅವರು ಶ್ರೀಮತಿ ಮಮತಾರವರ ಬೀಳ್ಕೊಡುಗೆ ಮಾತುಗಳನ್ನಾಡಿದರು. ಡಾ. ರಾಮು ಎಸ್. ಹಾಗೂ ಶ್ರೀಮತಿ ಮಮತಾರವರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಡಾ. ರಾಮು ಎಸ್. ಅವರು ಮಾತನಾಡಿ ಡಾ. ಕೆ.ವಿ.ಜಿ. ಯವರನ್ನು ಸ್ಮರಿಸುತ್ತಾ ಅವರ ಮಾರ್ಗದರ್ಶನದಿಂದ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯವಾಯಿತು ಎಂದು ಹಾಗೂ ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯವರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ಮತ್ತು ಎಲ್ಲಾ ಆಡಳಿತ ಮಂಡಳಿಯ ಸದಸ್ಯರಿಗೆ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿವರ್ಗದವರಿಗೆ ಧನ್ಯವಾದವನ್ನು ಸಮರ್ಪಿಸುತ್ತಾ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ನಂತರ ಕಾಲೇಜಿನ ಪ್ರಾಂಶುಪಾಲರಾದ ಡಾ| ಎನ್.ಎ. ಜ್ಞಾನೇಶ್‌ರವರು ಮಾತನಾಡಿದರು. ಕೃಷ್ಣರಾಜ್ ಎಂ.ವಿ. ಅಸಿಸ್ಟೆಂಟ್ ಪ್ರೊಫೆಸರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ ಪ್ರಾರ್ಥಿಸಿ, ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ.  ಸ್ವಾಗತಿಸಿದರು. ಡಾ. ಚಂದ್ರಶೇಖರ್ ಎ. ಪ್ರೊಫೆಸರ್ ಮತ್ತು ಮುಖ್ಯಸ್ಥರು, ಸಿವಿಲ್ ಇಂಜಿನಿಯರಿಂಗ್ ವಿಭಾಗ ವಂದನಾರ್ಪಣೆಗೈದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್‌ಗಳಾದ ಶ್ರೀಮತಿ ಶೃತಿ ಪಿ.ಜೆ ಮತ್ತು ಡಾ. ಲೇಖಾ ಬಿ.ಎಂ. ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ., ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ., ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಎ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಮಾಶಂಕರ್ ಕೆ.ಎಸ್., ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಸುರೇಶ ವಿ. ಎಂಬಿ.ಎ. ಮುಖ್ಯಸ್ಥರಾದ ಪ್ರೊ. ಕೃಷ್ಣಾನಂದ ಎ., ಟ್ರೈನಿಂಗ್ ಮತ್ತು ಪ್ಲೇಸ್‌ಮೆಂಟ್ ಅಧಿಕಾರಿ ಅನಿಲ್ ಬಿ.ವಿ, ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ಕೆವಿಜಿಡಿಸಿ ಆಡಳಿತಾಧಿಕಾರಿ ಮಾಧವ ಬಿ.ಟಿ., ಪ್ರಸನ್ನ ಕುಮಾರ್ ಕಲ್ಲಾಜೆ ಎ.ಒ.ಎಲ್.ಇ., ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.