Breaking News

ಕಿರ್ಲಾಯ: ಪೌಷ್ಟಿಕ ಆಹಾರ ಸಪ್ತಾಹ

Advt_Headding_Middle

ಕಿರ್ಲಾಯ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಸೆ. 3ರಂದು ನಡೆಯಿತು.
ಕಾರ್ಯಕ್ರಮವನ್ನು ಅರಂತೋಡು ಗ್ರಾ. ಪಂ. ಸದಸ್ಯ ಕೇಶವ ಅಡ್ತಲೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ತಾಲೂಕು ಆಶಾ ಮೇಲ್ವಿಚಾರಕಿ ಶ್ರೀಮತಿ ಧನ್ಯಶ್ರೀ ಗರ್ಭಿಣಿ ಹಾಗೂ ಬಾಣಂತಿಯರಿಗೆ ಸಮತೋಲನ ಆಹಾರ ಕ್ರಮ ಹಾಗೂ ಮಕ್ಕಳಿಗೆ ಶೌಚಾಲಯ ಉಪಯೋಗದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ನಿಶ್ಮಿತಾ ಪೂಜಾರಿ ಮನೆ ಹಾಗೂ ಆಶಾ ಕಾರ್ಯಕರ್ತೆ ಶ್ರೀಮತಿ ಭವಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು .
ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮಿ ಸ್ವಾಗತಿಸಿ, ವಂದಿಸಿದರು. ಮಕ್ಕಳ ಪೋಷಕರು ಮಾಡಿದ ವಿವಿಧ ಬಗೆಯ ಪೌಷ್ಠಿಕ ಆಹಾರಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.