Breaking News

ಬೆಳ್ಳಾರೆಯಲ್ಲಿ ತಾಲೂಕು ಶಿಕ್ಷಕರ ದಿನಾಚರಣೆ

Advt_Headding_Middle

 

ಗುರುವಿನ ಸ್ಮರಣೆ ಮುಖ್ಯವಾದುದು – ವಿನಯ ಕುಮಾರ್ ಕಂದಡ್ಕ

ಗುಣಮಟ್ಟದ ಕಲಿಕೆ ಅಗತ್ಯ – ಎಸ್.ಪಿ.ಶಿವಕುಮಾರ್

ಗುರುವಿನ ಸ್ಥಾನ ಮಹತ್ವವಾದುದು – ಅನಿತಲಕ್ಷ್ಮೀ

ದ.ಕ.ಜಿಲ್ಲಾ ಪಂಚಾಯತ್ ,ಸಾರ್ವಜನಿಕ ಶಿಕ್ಷಣ ಇಲಾಖೆ, ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ ಸೆ.5 ರಂದು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ನಡೆಯಿತು.

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮಂಡ್ಯ ಜಿಲ್ಲಾ ಉಪಯೋಜನಾ ಸಮನ್ಬಯಾಧಿಕಾರಿ ಎಸ್.ಪಿ.ಶಿವಕುಮಾರ್ ದಿಕ್ಸೂಚಿ ಭಾಷಣ ಮಾಡಿದರು.
ವೇದಿಕೆಯಲ್ಲಿ ತಹಶೀಲ್ದಾರ್ ಅನಿತಲಕ್ಷ್ಮೀ, ಮಂಡ್ಯ ಕಾಲೇಜಿನ ಉಪನ್ಯಾಸಕ ಶಿವಾನಂದ್, ಎಲಿಮಲೆ ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಪೇರಾಲು, ಬೆಳ್ಳಾರೆ ಕೆ.ಪಿ.ಎಸ್.ನ ಪ್ರಾಂಶುಪಾಲರಾದ ಹಸೀನಾ ಭಾನು, ಉಪಪ್ರಾಂಶುಪಾಲೆ ಉಮಾ ಕುಮಾರಿ, ದೈಹಿಕ ಶಿಕ್ಷಣ ಪರಿವೀಕ್ಷಕ ಲಕ್ಷ್ಮೀಶ ರೈ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಗಣೇಶ ರೈ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಮತಿ ವೀಣಾ ಎಂ.ಟಿ, ತೀರ್ಥರಾಮ ಹೊಸೊಳಿಕೆ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಅತ್ಯಾಡಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸೂಫಿ ಪೆರಾಜೆ, ಬೆಳ್ಳಾರೆ ಕೆ.ಪಿ.ಎಸ್.ನ ಮುಖ್ಯಗುರು ಮಾಯಿಲಪ್ಪ ಉಪಸ್ಥಿತರಿದ್ದರು.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ 19 ಮಂದಿ ಶಿಕ್ಷರನ್ನು ಸನ್ಮಾನಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ ಸ್ವಾಗತಿಸಿದರು.
ಶ್ರೀಮತಿ ಸುಮತಿ ಮತ್ತು ಬಳಗದವರು ಪ್ರಾರ್ಥಿಸಿದರು.
ಶಿಕ್ಷಕ ಶಶಿಧರ ಮಾವಿನಕಟ್ಟೆ ಮತ್ತು ಶ್ರೀಮತಿ ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.