ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದ ರಾಜ್ಯ ಸರಕಾರ

Advt_Headding_Middle

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ದು, 5 ದಿನ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು, ತಾಂತ್ರಿಕ ಸಲಹಾ ಸಮಿತಿಯ ವರದಿಯನ್ನು ಆಧರಿಸಿ ಈ ತೀರ್ಮಾನ ಕೈಗೊಂಡಿದ್ದು, ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆ  5 ದಿನ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದ್ದು, ಮೆರವಣಿಗೆಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರೂ ಕೂಡಾ ಅದು ಸರಳವಾಗಿಯೇ ಇರಬೇಕು. ಅದ್ದೂರಿ ಆಚರಣೆಗೆ ಅವಕಾಶವಿಲ್ಲ. ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲಿಯೇ ಗಣೇಶ ವಿಸರ್ಜನೆ ಮಾಡಬೇಕು ಎಂದು ತಿಳಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.