Breaking News

ನೆಟ್ಟಾರು : ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

Advt_Headding_Middle

ಅಕ್ಷಯ ಯುವಕ ಮಂಡಲ ನೆಟ್ಟಾರು, ಅಕ್ಷತಾ ಮಹಿಳಾ ಮಂಡಲ ನೆಟ್ಟಾರು ಹಾಗೂ ಶಾಲಾಭಿವೃದ್ಧಿ ಸಮಿತಿ ನೆಟ್ಟಾರು ಶಾಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನೆಟ್ಟಾರು ಪರಿಸರದ ಸ್ವಚ್ಛತಾ ಕಾರ್ಯಕ್ರಮ ಸೆ.05 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕ್ಷಯ ಯುವಕ ಮಂಡಲದ ಅಧ್ಯಕ್ಷ ಶ್ರೀಜಿತ್ ರೈ ಮಣಿಕ್ಕರ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ ಮಾತನಾಡಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ ದೇಶಾದ್ಯಂತ 75ನೇ ಸ್ವಾತಂತ್ರ್ಯ ಮಹೋತ್ಸವದ ಕಾರ್ಯಕ್ರಮವನ್ನು ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 75 ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.ಅದೇ ರೀತಿ ಬೆಳ್ಳಾರೆಯಲ್ಲೂ ಸಹ ಕಾರ್ಯಕ್ರಮಗಳು ನಡೆಯುತ್ತಿವೆ.ಮೋದಿಯವರ ಸ್ವಚ್ಚ ಭಾರತ ಕಲ್ಪನೆಯಂತೆ ಸಂಘ ಸಂಸ್ಥೆಗಳ ಜೊತೆಗೂಡಿ ನೆಟ್ಟಾರು ಅಕ್ಷಯ ಯುವಕ ಮಂಡಲವು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದೀರಿ ನಿಮ್ಮ ಕಾರ್ಯ ಮಾದರಿಯಾಗಲಿ ಎಂದರು.ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರು ಯುವಕ ಮಂಡಲದ ಕಾರ್ಯವನ್ನು ಶ್ಲಾಘಿಸಿದರು.
ಅಕ್ಷತಾ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ನಳಿನಿ ಶಶಿಕಾಂತ್ ಶುಭಹಾರೈಸಿದರು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ಪೆಲತ್ತಮೂಲೆ ಮಾತನಾಡಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಹೇಳಿದರು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಉಷಾ ಯೋಗೀಶ್ ಮಾತನಾಡಿ ಪರಿಸರದ ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಅದನ್ನು ಎಲ್ಲಾ ಸದಸ್ಯರು ಸೇರಿ ಮಾಡಿದ್ದೀರಿ ತಮಗೆ ಅಭಿನಂದನೆಗಳು ಎಂದರು. ಸ್ವಚ್ಛತಾ ಕಾರ್ಯದಲ್ಲಿ ಯುವಕ ಮಂಡಲದ ಗೌರವಾಧ್ಯಕ್ಷ ವೆಂಕಟ್ರಮಣ ಗೌಡ,ಕಾರ್ಯದರ್ಶಿ ಜಯಪ್ರಕಾಶ್ ಮೊಗಪ್ಪೆ,ಕೋಶಾಧಿಕಾರಿ ಪ್ರತೀಕ್,ಸದಸ್ಯರಾದ ವಸಂತ್, ಪದ್ಮನಾಭ, ಪ್ರವೀಣ್. ಸಿ, ಭಾಸ್ಕರ,ಯೋಗೀಶ್,ಪ್ರವೀಣ್,ಲೋಕೇಶ್,ವಿಜೇಶ್,ರವಿಪ್ರಕಾಶ್,ಓಂ ಪ್ರಕಾಶ್, ರವೀಶ್,ಮಧು,ಮುಖೇಶ್,ಚೇತನ್, ಬಾಬು,ಕೃಷ್ಣ ಪ್ರಸಾದ್,ಹರೀಶ್,ಪ್ರದೀಪ್, ಅಶೋಕ,ಕುಶಾಲಪ್ಪ, ಮಹಿಳಾ ಮಂಡಲ ಸದಸ್ಯರಾದ ರಶ್ಮಿ,ಹರಿಣಾಕ್ಷಿ ಪಾಲ್ಗೊಂಡಿದ್ದರು. ಶೈಲೇಶ್ ನೆಟ್ಟಾರು ಕಾರ್ಯಕ್ರಮ ನಿರೂಪಿಸಿ ಯುವಕ ಮಂಡಲದ ಅಧ್ಯಕ್ಷ ಶ್ರೀಜಿತ್ ಧನ್ಯವಾದವಿತ್ತರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.