ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ

Advt_Headding_Middle

ಶಿಕ್ಷಕರುಗಳಾದ ವನಜಾಕ್ಷಿ ಆಲೆಟ್ಟಿ,ಸುಬ್ರಹ್ಮಣ್ಯ ಎ.ಯು.,ಹಸೀನಾ ಬಾನು,ಪ್ರತಿಭಾ ಆಳ್ವರಿಗೆ ಪ್ರಶಸ್ತಿ ಪ್ರದಾನ
ಸುಳ್ಯದ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷ ಕೊಡಮಾಡಲ್ಪಡುವ ಉತ್ತಮ ಶಿಕ್ಷಕ ಪ್ರಶಸ್ತಿಗೆ ನಾಲ್ವರು ಶಿಕ್ಷಕರು ಆಯ್ಕೆಯಾಗಿದ್ದು, ಅವರಿಗೆ ಇಂದು ಸುಳ್ಯ ಸಂಧ್ಯಾರಶ್ಮಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ನಿವೃತ್ತ ಮುಖ್ಯ ಶಿಕ್ಷಕಿ ವನಜಾಕ್ಷಿ ಆಲೆಟ್ಟಿ,ದುಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು.,ಬೆಳ್ಳಾರೆ ಪ.ಪೂ.ಕಾಲೇಜು ಪ್ರಾಂಶುಪಾಲೆ ಹಸೀನಾ ಬಾನು,ಗ್ರೀನ್ ವ್ಯೂ ಪ್ರೌಢಶಾಲಾ ಶಿಕ್ಷಕಿ ಪ್ರತಿಭಾ ಆಳ್ವ ಉತ್ತಮ ಪ್ರಶಸ್ತಿ ಸ್ವೀಕರಿಸಿದರು.
ಸುಳ್ಯ ತಹಶಿಲ್ದಾರ್ ಕು.ಅನಿತಲಕ್ಷ್ಮಿ ,ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸನ್ಮಾನಿಸಿದರು. ಮಾಜಿ ನಗರ ಪಂಚಾಯತ್ ಅಧ್ಯಕ್ಷ ಎಸ್.ಸಂಶುದ್ದಿನ್, ಟ್ರಸ್ಟ್ ನ ಗೌರವಾಧ್ಯಕ್ಷ,ನ.ಪಂ.ಮಾಜಿ ಸದಸ್ಯ ಕೆ.ಎಂ.ಮುಸ್ತಫಾ, ಮಿಸೆಸ್ ಕರ್ನಾಟಕ ದೀಪಿಕಾ ಅಡ್ತಲೆ ಅತಿಥಿಯಾಗಿದ್ದರು.ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಜ್ ಕಟ್ಟೆಕ್ಕಾರ್,ನಿರ್ದೇಶಕ ಸಿದ್ದಿಕ್ ಕೊಕ್ಕೊ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೇವಿಪ್ರಸಾದ್ ಕಾಯರ್ತೋಡಿ ಪ್ರಾರ್ಥಿಸಿದರು.
ಟ್ರಸ್ಟ್ ನ ನಿರ್ದೇಶಕ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.ಶಿಕ್ಷಕ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.