Breaking News

ಬಳ್ಪ: ಶಿಕ್ಷಕರ ದಿನಾಚರಣೆ

Advt_Headding_Middle

ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳ್ಪ ಇಲ್ಲಿಯ ಎಸ್.ಡಿ.ಎಂ.ಸಿ. ಸದಸ್ಯರಿಂದ ಶಿಕ್ಷಕರ ದಿನಾಚರಣೆಯನ್ನು ಸೆ. 5ರಂದು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಳ್ಪ ಸ.ಉ.ಹಿ.ಪ್ರಾ. ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಗಿರಿಜಾ ನೆರವೇರಿಸಿದರು. ಶಾಲಾ ಶಿಕ್ಷಕರುಗಳಾದ ಶ್ರೀಮತಿ ಭಾಗೀರಥಿ, ಶ್ರೀಮತಿ ಮೋಹಿನಿ, ಶ್ರೀಮತಿ ಗುಲಾಬಿ, ಶ್ರೀಮತಿ ಪ್ರೀತಿ ರೈ, ಶ್ರೀಮತಿ ಲೋಲಾಕ್ಷಿ, ಆನಂದ ಮಾಸ್ತರ್ ಬಳ್ಪ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮೋಹಿನಿಯವರು ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಎಸ್.ಡಿ.ಎಂ.ಸಿ. ಸದಸ್ಯರಾದ ತಿರುಮಲೇಶ್ವರಿ ಎಡೋಣಿ, ಉಮೇಶ್ ಬುಡೆಂಗಿ, ಗಣೇಶ ಕಿನ್ನಿಕುಮ್ಮೆರಿ, ವೇದಾವತಿ ಕೋಡಂಗೋಲಿ, ಉಷಾ ಹೊಪ್ಪಳೆ ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ನೇತ್ರಾವತಿ ಹೊಪ್ಪಾಳೆ ಸ್ವಾಗತಿಸಿ ಶಿಕ್ಷಕರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ರವೀಂದ್ರ ಮುಡ್ಲಾ ವಂದಿಸಿದರು. ಎಸ್.ಡಿ.ಎಂ.ಸಿ. ಸದಸ್ಯರಾದ ಶ್ರೀಮತಿ ಭವ್ಯ ಎ. ಕೆ. ಶಿಕ್ಷಕರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.