ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಕುರಿತು ಡಿವೈಎಸ್ಪಿ ನೇತೃತ್ವದಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಸಭೆ

Advt_Headding_Middle

 

 

ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಆಚರಿಸಲು ರಾಜ್ಯಸರ್ಕಾರ ಷರತ್ತುಬದ್ಧ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದು ಸುಳ್ಯ ತಾಲೂಕಿನ ಸುಮಾರು 10 ಕಡೆಗಳ ಗಣೇಶೋತ್ಸವ ಸಮಿತಿ ಸದಸ್ಯರುಗಳನ್ನು ಸುಳ್ಯ ಪೊಲೀಸ್ ಠಾಣೆಯಲ್ಲಿ ಕರೆದು ಪುತ್ತೂರು ವಿಭಾಗದ ಡಿವೈಎಸ್ಪಿ ಡಾ.ಕುಮಾರಿ ಘಾನ ರವರ ನೇತೃತ್ವದಲ್ಲಿ ಇಂದು ಸಂಜೆ ಸಭೆ ನಡೆಸಿದರು . ಈ ವೇಳೆ ಮಾತನಾಡಿದ ಡಿವೈಎಸ್ಪಿ ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಬಂಧ ಹೇರಲಾಗಿದ್ದು, ಸರಳ ಹಾಗೂ ಸಾಂಪ್ರದಾಯಿಕವಾಗಿ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ ಆದೇಶಿಸಿದೆ. ಆದ್ದರಿಂದ ಕೋವಿಡ್ ನಿಯಮಗಳನ್ನು ಪಾಲಿಸಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದ ರೀತಿಯಲ್ಲಿ ಸರಳವಾಗಿ ಆಚರಿಸಿಕೊಳ್ಳುವಂ ತೆ ಸಂಘಟನೆಯ ವರೊಂದಿಗೆ ಸೂಚನೆ ನೀಡಿದರು.
ಯಾವುದೇ ಸಾಂಸ್ಕೃತಿಕ ಹಾಗೂ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ, ಹೆಚ್ಚು ಗದ್ದಲಕ್ಕೆ ಅವಕಾಶವಿಲ್ಲದಂತೆ ಸರಳ ಹಾಗೂ ಸಾಂಪ್ರದಾಯಿಕವಾಗಿ ಗಣೇಶ ಪೂಜೆಗೆ ಮಾತ್ರ ಅವಕಾಶ ಮಾಡಿಕೊಳ್ಳಬೇಕು ಎಂದು ಹೇಳಿದರು.
ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲೂ ಮೆರವಣಿಗೆ, ಉತ್ಸವ ಮಾಡುವುದಕ್ಕೂ ನಿರ್ಬಂಧ ವಿಧಿಸುವ ಜತೆಗೆ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು. ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಮಾಹಿತಿ ನೀಡಿದರು. ದೇವಸ್ಥಾನಗಳಲ್ಲೂ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅವಕಾಶವಿದ್ದು, ಇಲ್ಲೂ ಕೊರೊನಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ, ಗಣೇಶನ ದರ್ಶನಕ್ಕೆ ಬರುವ ಭಕ್ತರು ಮಾಸ್ಕ್ ಕಡ್ಡಾಯ ಹಾಗೆಯೇ ಥರ್ಮಲ್ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಸ್ ಕಡ್ಡಾಯಗೊಳಿಸಿ ಮಾರ್ಗಸೂಚಿಗಳನ್ನು ಅನುಸರಿಸಿ ಕೊಳ್ಳಬೇಕು ಎಂದು ಹೇಳಿದರು. ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಉಪಸ್ಥಿತರಿದ್ದು ಸುಳ್ಯ ಠಾಣಾ ಉಪನಿರೀಕ್ಷಕ ಎಂ ಆರ್ ಹರೀಶ್ ಸ್ವಾಗತಿಸಿ ವಂದಿಸಿದರು. ಸುಳ್ಯ ತಾಲೂಕಿನ ಸಂಪಾಜೆ, ದುಗ್ಗಲಡ್ಕ, ಉಬರಡ್ಕ, ಅಜ್ಜಾವರ, ಉಬರಡ್ಕ ಮಿತ್ತೂರು, ಕಲ್ಲುಗುಂಡಿ, ಮರ್ಕಂಜ,ಕೋಲ್ಚಾರು, ಸುಳ್ಯ ನಗರದ ಹಳೆಗೇಟು, ಜಟ್ಟಿಪಳ್ಳ, ಮುಂತಾದ ಕಡೆಗಳ ಗಣೇಶೋತ್ಸವ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.