ಜಾಲ್ಸೂರು ಗ್ರಾಮದ ಬೊಳುಬೈಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವೆಂಕಟೇಶ ನಡುಬೆಟ್ಟು ಅವರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸಿಕೆ ಕಾರ್ಯಕ್ರಮವು ಸೆ.8ರಂದು ನಡೆಯಿತು.
ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವರಾದ ಎಸ್ ಅಂಗಾರ ಅವರು ನಾಮಫಲಕ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಭೊದ್ ಶೆಟ್ಟಿ ಮೆನಾಲ, ಜಾಲ್ಸೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯರಾಜ್ ಕುಕ್ಕೆಟ್ಟಿ, ಕಾರ್ಯದರ್ಶಿ ಹೇಮಂತ್ ಮಠ,ಶಕ್ತಿ ಕೇಂದ್ರ ಅಧ್ಯಕ್ಷ ಸುಕೇಶ್ ಆಡ್ಕಾರು, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಕರುಣಾಕರ ರೈ ಕುಕ್ಕಂದೂರು, ,ಜಾಲ್ಸೂರುಗ್ರಾಮದ ಬೂತ್ ಸಮಿತಿ ಅಧ್ಯಕ್ಷರು,ಕಾರ್ಯಕರ್ತರು,ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಬೊಳುಬೈಲು ಬೂತ್ ಸಮಿತಿ ಅಧ್ಯಕ್ಷ ವೆಂಕಟೇಶ್ ನಡುಬೆಟ್ಟು ಸ್ವಾಗತಿಸಿ, ಬಿಜೆಪಿ ಸುಳ್ಯ ಮಂಡಲ ಸಾಮಾಜಿಕ ಜಾಲತಾಣ ಪ್ರಕೊಷ್ಠ ಸದಸ್ಯ ಪ್ರಸಾದ್ ಕಾಟೂರು ವಂದಿಸಿದರು.