ಮಾನವೀಯ ನೆಲೆಯಲ್ಲಿ ಪ್ರತಿಕ್ರಿಯಿಸಲು ಪ್ರಥಮ ಚಿಕಿತ್ಸೆಯ ಅರಿವು ಪ್ರತಿಯೊಬ್ಬರಿಗೂ ಅಗತ್ಯ : ಅನಿತಾಲಕ್ಷ್ಮಿ

Advt_Headding_Middle

 

 

ದಯೆ ಮತ್ತು ಮಾನವೀಯ ಮೌಲ್ಯಕ್ಕೆ ಹೆಸರಾದ ರೆಡ್ ಕ್ರಾಸ್ ಸಂಸ್ಥೆಯು ಸಮಾಜಕ್ಕೆ ಅಗತ್ಯವಾದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ದ ಕ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯು ಜಿಲ್ಲೆಯಾದ್ಯಂತ ಪ್ರಥಮ ಚಿಕಿತ್ಸೆಯ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳುತ್ತಿದ್ದು ವ್ಯಕ್ತಿಯ ಜೀವವನ್ನು ಉಳಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ಸುಳ್ಯ ತಾಲೂಕು ತಹಶೀಲ್ದಾರರಾದ ಕು. ಅನಿತಾಲಕ್ಷ್ಮಿ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಾಜ್ಯ ಶಾಖೆ, ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಸುಳ್ಯ ತಾಲೂಕು ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ವಿಶ್ವವಿದ್ಯಾಲಯದ ರೆಡ್ ಕ್ರಾಸ್ ಘಟಕ ಹಾಗೂ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕಗಳ ಆಶ್ರಯದಲ್ಲಿ ಸುಳ್ಯ ತಾಲೂಕಿನ ಪ್ರೌಢಶಾಲಾ ಶಿಕ್ಷಕರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗಾಗಿ ಹಮ್ಮಿಕೊಂಡ ಒಂದು ದಿನದ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ಘಟಕದ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ಮಾತನಾಡಿ ಯಾವುದೇ ತರಬೇತಿ ಪರಿಪೂರ್ಣವಾಗುವುದು ಪಡೆದಂತಹ ತರಬೇತಿಯನ್ನು ಕಾರ್ಯರೂಪಕ್ಕಿಳಿಸಿದಾಗ ಮಾತ್ರ. ಆ ನಿಟ್ಟಿನಲ್ಲಿ ಇಲ್ಲಿ ಪಡೆದಂತಹ ತರಬೇತಿಯನ್ನು ತಮ್ಮ ಜೀವನದಲ್ಲಿ ಕಾರ್ಯರೂಪಕ್ಕಿಳಿಸುವ ಮೂಲಕ ಸಮಾಜಮುಖೀ ಕಾರ್ಯದಲ್ಲಿ ತೊಡಗಿಕೊಳ್ಳಿ ಎಂದು ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಆಯೋಜಿಸುವ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಆರೋಗ್ಯಕಾರಿ ಡಾ. ನಂದಕುಮಾರ್ ಬಿ, ಸುಳ್ಯ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಕೆ ಎಂ, ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ, ಶಿಕ್ಷಣ ಸಂಯೋಜಕಿ ಶ್ರೀಮತಿ ನಳಿನಿ, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಶ್ರೀಮತಿ ರತ್ನಾವತಿ ಡಿ, ತರಬೇತುದಾರರಾದ ಅಶ್ವಿನ್ ಕುಮಾರ್ ಘಟಕ ನಾಯಕರಾದ ಗಗನ್ , ಕೃತಿಕಾ ಮೊದಲಾದವರು ಉಪಸ್ಥಿತರಿದ್ದರು. ಅನಘಾ, ತೇಜಸ್ವಿನಿ, ಲಿಮಿತಾ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸಮಿತಿ ಸದಸ್ಯರು, ತರಬೇತುದಾರರಾದ ಸಚೇತ್ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ, ತರಬೇತಿ ಕಾರ್ಯಾಗಾರದ ಸಂಘಟಕಿ ಡಾ. ಅನುರಾಧಾ ಕುರುಂಜಿ ಸ್ವಾಗತಿಸಿದರು. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಕುಲದೀಪ್ ಪೆಲ್ತಡ್ಕ ವಂದಿಸಿ, ರೆಡ್ ಕ್ರಾಸ್ ಸದಸ್ಯೆ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು ಸುಳ್ಯ ತಾಲೂಕಿನ 100 ಮಂದಿ ಪ್ರೌಢ ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ತರಬೇತಿಯ ಸದುಪಯೋಗ ಪಡೆದುಕೊಂಡರು. ಕಾಲೇಜಿನ ಯುವ ರೆಡ್ ಕ್ರಾಸ್ ನ ಹಿರಿಯ ವಿದ್ಯಾರ್ಥಿಗಳ ಪರವಾಗಿ 2019-20 ರ ಘಟಕ ನಾಯಕರುಗಳಾದ ಭುವನ್, ಜಯಮಾಲ, ರಾಜೇಶ್ವರಿ ಯುವ ರೆಡ್ ಕ್ರಾಸ್ ಘಟಕಕ್ಕೆ ಪ್ಲಾಸ್ಕ್ ಹಾಗೂ ಆಲ್ಬಂ ಗಳನ್ನು ಕೊಡುಗೆಯಾಗಿ ನೀಡಿದರು. ಕಾಲೇಜಿನ ಉಪನ್ಯಾಸಕರು ಹಾಗೂ ಕಾಲೇಜಿನ ರೆಡ್ ಕ್ರಾಸ್ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.