ಸುಬ್ರಹ್ಮಣ್ಯ ಗ್ರಾ.ಪಂ ನಲ್ಲಿ ಸಂಘ ಸಂಸ್ಥೆಗಳೊಂದಿಗೆ ಕೋವಿಡ್ ಕಾರ್ಯಪಡೆ ಸಭೆ

Advt_Headding_Middle

 

ಗ್ರಾ.ಪಂ ವ್ಯಾಪ್ತಿಯಲ್ಲಿ ಸೆ.10 ರಿಂದ ಸೆ.20 ರವರೆಗೆ ಕೊರೋನಾ ವಾಕ್ಸಿನೇಶನ್ ಅಭಿಯಾನ

ಗ್ರಾ ಪಂ ನ ಪ್ರತಿಯೊಬ್ಬರಿಗೂ ವಾರ್ಡ್ ಮಟ್ಟದಲ್ಲಿ ಲಸಿಕೆ ವಿತರಣೆ

ಸುಬ್ರಹ್ಮಣ್ಯ ಗ್ರಾ.ಪಂ ನ ಕೋವಿಡ್ ಕಾರ್ಯಪಡೆ ಸಭೆ ಸೆ.8 ರಂದು ಗ್ರಾ.ಪಂ ನಡೆದಿದ್ದು ಗ್ರಾ.ಪಂ ಪ್ರತಿಯೊಬ್ಬರಿಗೂ ವಾರ್ಡ್ ಮಟ್ಟದಲ್ಲಿ ಲಸಿಕೆ ವಿತರಿಸಲು ನಿರ್ಧರಿಸಲಾಗಿದೆ.

ಸುಬ್ರಹ್ಮಣ್ಯ ಗ್ರಾ.ಪಂ ವ್ಯಾಪ್ತಿಯಲ್ಲಿ
ಸೆ.10 ರಿಂದ ಸೆ.20 ರವರೆಗೆ ಕೊರೋನಾ ವಾಕ್ಸಿನೇಶನ್ ಅಭಿಯಾನ ಆಯೋಜಿಸಲು ನಿರ್ಧರಿಸಲಾಗಿದ್ದು ವಾರ್ಡ್ ಮಟ್ಟದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಪಡೆಯುಂತೆ ರೂಪುರೇಷೆ ಮಾಡಲಾಗಿದೆ. ವಿಕಲಚೇತನರಿಗೆ ಮತ್ತು ವಯೋವೃದ್ದ ಹಿರಿಯ ನಾಗರಿಕರಿಗೆ ಲಸಿಕೆ ಪಡೆಯಲು ವಾಹನ ವ್ಯವಸ್ಥೆ ಮಾಡಲಾಗಿದೆ. ಪ್ರತಿ ವಾರ್ಡ್ ನ ಗ್ರಾ.ಪಂ ಸದಸ್ಯರು ಇದಕ್ಕೆ ಪೂರಕ ವ್ಯವಸ್ಥೆ ನೋಡಿಕೊಳ್ಳಲಿದ್ದಾರೆ.
ಈ ಒಂದು ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ಲಲಿತಾ ಗುಂಡಡ್ಕ ವಹಿಸಿದ್ದರು. ಡಾ. ತ್ರಿಮೂರ್ತಿ ಮಾಹಿತಿ ನೀಡಿದರು. ಗ್ರಾ.ಪಂ ಉಪಾಧ್ಯಕ್ಷೆ ಸವಿತಾ ಭಟ್, ಪಿಡಿಒ ಶೇಖರ್, ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯ ದಯಾನಂದ, ಏನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಭವಾನಿ ಶಂಕರ ಪೂಂಬಾಡಿ, ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡು, ಕೆ ಎಸ್ ಎಸ್ ಕಾಲೇಜಿನ ಉಪನ್ಯಾಸಕಿ ಆರತಿ, ಕಾರ್ಯದರ್ಶಿ ಮೋನಪ್ಪ ವೇದಿಕೆಯಲ್ಲಿದ್ದರು. ಪಿಡಿಒ ಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಮೋನಪ್ಪ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಸಭೆಯಲ್ಲಿ ವಿವಿಧ ಸಂಘಟನೆಗಳ ಪಾದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ ಸದಸ್ಯರು, ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.