ಕೋವಿಡ್ ಕಾಲದಲ್ಲಿ ಪತ್ರಕರ್ತರ ಕಾರ್ಯ ಶ್ಲಾಘನೀಯ: ಅನಿತಾಲಕ್ಷ್ಮಿ

Advt_Headding_Middle

 

ಕಾರ್ಮಿಕ ಇಲಾಖೆಯ ವತಿಯಿಂದ ಪತ್ರಕರ್ತರಿಗೆ ಕಿಟ್ ವಿತರಣೆ

ಕೋವಿಡ್ ಸಂಕಷ್ಟ ಸಮಾಜದ ಎಲ್ಲಾ ವಿಭಾಗಗಳನ್ನೂ ತಟ್ಟಿದೆ.ಕಳೆದ‌ ಎರಡು ವರ್ಷಗಳಿಂದ ಸಮಾಜದ ಹಲವರ ಕಷ್ಟ-ನಷ್ಟಗಳನ್ನು ನೋಡುವಂತಾಗಿದೆ. ಕೋವಿಡ್ ಮಹಾಮಾರಿಯಂತಹಾ ಸಂದರ್ಭದಲ್ಲಿ ಪತ್ರಕರ್ತರ ಕಾರ್ಯ ಶ್ಲಾಘನೀಯವಾದುದು ಎಂದು ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಹೇಳಿದ್ದಾರೆ. ಕಾರ್ಮಿಕ ಇಲಾಖೆಯ ವತಿಯಿಂದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ನೀಡಿದ ಆಹಾರ ಕಿಟ್ ಗಳನ್ನು
ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಿ ಅವರು ಮಾತನಾಡಿದರು. ಕೋವಿಡ್ ಸಂದರ್ಭದಲ್ಲಿ ಸಂಕಷ್ಟ ಅನುಭವಿಸಿದ ಎಲ್ಲಾ ವಿಭಾಗಗಳಿಗೂ ಸರಕಾರ ಸ್ಪಂದಿಸುವ ಕಾರ್ಯ ಮಾಡಿದೆ. ಆ ಮೂಲಕ ಸರಕಾರ ಜನರ ಜೊತೆಗಿದೆ ಎಂಬ ಧೈರ್ಯ ತುಂಬಿದೆ ಎಂದು ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರಿಗೆ ಮನೆ ನಿವೇಶನ ಪಡೆಯಲು ನಡೆಸುತ್ತಿರುವ ಪ್ರಯತ್ನಕ್ಕೆ ಕಂದಾಯ ಇಲಾಖೆಯ ವತಿಯಿಂದ ಪೂರ್ಣ ಸಹಕಾರ ನೀಡಲಾಗುವುದು. ಸರಕಾರದಿಂದ ಆದೇಶ ದೊರೆತ ಕೂಡಲೇ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ ಪತ್ರಕರ್ತರ ಕ್ಷೇಮಕ್ಕಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನಿರಂತರ ಕೆಲಸ ಮಾಡುತ್ತಾ ಬಂದಿದೆ. ಕೊರೋನಾ ಸಂಕಷ್ಟ ಸಮಯದಲ್ಲಿಯೂ ಸಂಘ ಸೂಕ್ತವಾಗಿ ಸ್ಪಂದಿಸಿದೆ. ಪತ್ರಕರ್ತರಿಗೆ ಮನೆ ನಿವೇಶನ ಪಡೆಯುವುದು ಪತ್ರಕರ್ತರ ಸಂಘದ ಮಹತ್ವಾಕಾಂಕ್ಷಿ ಯೋಜನೆ. ಈ ನಿಟ್ಟಿನಲ್ಲಿ ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘ ಸ್ಥಾಪಿಸಿ ಸರಕಾರದ ಮಟ್ಟದಲ್ಲಿ ಕಾರ್ಯಪ್ರವೃತ್ತವಾಗಿದೆ. ಸಹಕಾರಿ ಸಂಘದ ಮುಖಾಂತರ ಪತ್ರಕರ್ತರಿಗೆ ಮನೆ ನಿವೇಶನ ಒದಗಿಸುವುದು ಸಂಘದ ಗುರಿ ಎಂದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್ ಮಾತನಾಡಿದರು.ದ.ಕ.ಜಿಲ್ಲಾ ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ,ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪದ್ಮನಾಭ ಮುಂಡೋಕಜೆ ವಂದಿಸಿದರು. ‌ಸಂಘದ ಕಾರ್ಯದರ್ಶಿ ಗಣೇಶ್ ಮಾವಂಜಿ, ಗೌರವಾಧ್ಯಕ್ಷ ಕೃಷ್ಣ ಬೆಟ್ಟ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.