ಸುಬ್ರಹ್ಮಣ್ಯ ಕೆ ಎಸ್ ಎಸ್ ಕಾಲೇಜಿನಲ್ಲಿ ಅರೆಭಾಷೆ ಸಂಸ್ಕೃತಿ ಶಿಬಿರ ಸಮಾರೋಪ

Advt_Headding_Middle

 

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಐಕ್ಯೂಎಸಿ ಘಟಕ ಮತ್ತು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇದರ ಜಂಟಿ ಆಶ್ರಯದಲ್ಲಿ ಅರೆಭಾಷೆ ಸಂಸ್ಕೃತಿ ಶಿಬಿರದ ಸಮಾರೋಪ ಕಾರ್ಯಕ್ರಮ ಸೆ.೯ ರಂದು ನಡೆಯಿತು.
ರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಮಹಾವಿದ್ಯಾಲಯ ಸುಬ್ರಹ್ಮಣ್ಯ ಪ್ರಾಂಶುಪಾಲ ಡಾ. ಗೋವಿಂದ ಎನ್ ಎಸ್ ವಹಿಸಿದ್ದರು. ಅತಿಥಿಯಾಗಿ ವ್ಯವಸ್ಥಾಪನ ಸಮಿತಿ ಕುಕ್ಕೆ ಸುಬ್ರಹ್ಮಣ್ಯ ಇದರ ಸದಸ್ಯೆ ಶ್ರೀಮತಿ ಶೋಭಾ ಗಿರಿಧರ್, ನಿವೃತ ದೈಹಿಕ ಶಿಕ್ಷಣ ನಿರ್ದೇಶಕ ತುಕಾರಾಮ ಏನೆಕಲ್ಲು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಪುರುಷೋತ್ತಮ ಕಿರ್ಲಾಯ ಮತ್ತು ಜಯಪ್ರಕಾಶ್ ಮೋಂಟಡ್ಕ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಉಮೇಶ ಗೌಡ ಮಕ್ಕಿ, ಶ್ರೀಮತಿ ಪವಿತ್ರ ಹೇಮಂತ್ ದೊಡ್ಡಮನೆ, ಅರೆಭಾಷೆ ಸಂಘದ ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ಸಂಚಾಲಕರಾದ ಶ್ರೀಮತಿ ಸುಮಿತ್ರ, ಕೆ ಎಸ್ ಎಸ್ ಕಾಲೇಜು ಅರೆಭಾಷೆ ಸಂಘದ ಅಧ್ಯಕ್ಷ ಉಪಸ್ಥಿತರಿದ್ದರು. ಜಯಪ್ರಕಾಶ್ ಮೋಂಟಡ್ಕ ಸ್ವಾಗತಿಸಿ, ಶ್ರೀಮತಿ ಸುಮಿತ್ರ ವಂದಿಸಿದರು. ಹಾಗೂ ದ್ವಿತೀಯ ಬಿ.ಕಾಂ.ನ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.