ನಾಳೆ  ಏನೆಕಲ್ಲಿನಲ್ಲಿ ಅರೆಭಾಷೆ ಸಂಸ್ಕೃತಿ ಶಿಬಿರ ಆರಂಭ

Advt_Headding_Middle

 

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಏನೆಕಲ್ ಗ್ರಾಮದ ಅರೆಭಾಷೆ ಬಾಂಧವರು ಇದರ ಆಶ್ರಯದಲ್ಲಿ ಅರೆಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮೂರು ದಿನಗಳ ಅರೆಭಾಷೆ ಸಂಸ್ಕೃತಿ ಶಿಬಿರ ನಡೆಯಲಿದೆ ಎಂದು ಅರೆಭಾಷೆ ಸಂಸ್ಕೃತಿ ಶಿಬಿರ ಆಯೋಜನಾ ಸಮಿತಿ ಅಧ್ಯಕ್ಷ ನಾಗರಾಜ ಪರಮಲೆ ತಿಳಿಸಿದರು.
ಅವರು ಸೆ.9 ರಂದು ಸುಬ್ರಹ್ಮಣ್ಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಶಿಬಿರದ ಉದ್ಘಾಟನೆ ಬೆಳಿಗ್ಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಂಗಣ, ಏನೆಕಲ್‌ನಲ್ಲಿ ನೆರೆವೇರಲಿದೆ. ಶಿಬಿರದ ಉದ್ಘಾಟನೆಯನ್ನು ಏನೆಕಲ್ ಗ್ರಾಮದ ಮಾಗಣಿ ಗೌಡ ಉದಯಕುಮಾರ್ ಬಾನಡ್ಕ ನೆರವೇರಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಏನೆಕಲ್ ಪ್ರಾಥಮಿಕ ಕೃಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಭವಾನಿ ಶಂಕರ ಪೂಂಬಾಡಿ, ಕುಲ್ಕುಂದ ಬಸವೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರಿಧರ ಸ್ಕಂದ, ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯರುಗಳಾದ ಮೋಹನ್ ಗೌಡ ಕೋಟಿಗೌಡನ ಮನೆ, ಜಯಂತಿ ವೆಂಕಟೇಶ್ ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಅಕಾಡೆಮಿಯ ಸದಸ್ಯ ಜಯಪ್ರಕಾಶ್ ಮೋಂಟಡ್ಕ ಬಿಳಿನೆಲೆ, ಶಿಬಿರ ಆಯೋಜನಾ ಸಮಿತಿ ಸಂಚಾಲಕ ಶಿವರಾಮ್ ಏನೆಕಲ್, ಕಾರ್ಯದರ್ಶಿ ವಿಜಯಕುಮಾರ್ ಅಮೈ, ಭರತ್ ನೆಕ್ರಾಜೆ, ರಾಮಕೃಷ್ಣ ಮಲ್ಲಾರ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.