Breaking News

ಬಳ್ಪ: ಪೋಷಣ್ ಮಾಸಾಚರಣೆ

Advt_Headding_Middle

 

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶುಅಭಿವೃದ್ಧಿ ಯೋಜನೆ ಸುಳ್ಯ, ಬಳ್ಪ ಗ್ರಾಮಪಂಚಾಯತ್ ಮತ್ತು ಯಶಸ್ವಿ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬಳ್ಪ ಇದರ ಸಹಕಾರದಲ್ಲಿ ಪೋಷಣ್ ಮಾಸಾಚರಣೆ ಮತ್ತು ಮಾತೃ ವಂದನಾ ಸಪ್ತಾಹ ಪೌಷ್ಠಿಕ ಸಪ್ತಾಹ ಕಾರ್ಯಕ್ರಮ ಸೆ. 9ರಂದು ಬಳ್ಪ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ತ್ರೀ ಶಕ್ತಿ ಗೊಂಚಲಿನ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋನಪ್ಪ .ಡಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿ, ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಪೌಷ್ಠಿಕ ಕೈತೋಟ ನಿರ್ಮಿಸುವ ಕುರಿತು ಮಾಹಿತಿ ನೀಡಿದರು. ಶಿಶು ಅಭಿವೃದ್ಧಿ ಯೋಜನೆ ಪಂಜ ವಲಯದ ಮೇಲ್ವಿಚಾರಕಿ ಶ್ರೀಮತಿ ರವಿಶ್ರೀ. ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಪೋಷಣ್ ಮಾಸಾಚರಣೆಯ ಉದ್ದೇಶಗಳು ಮತ್ತು ಮಾತೃವಂದನ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಶ್ರೀಮತಿ ಶ್ರದ್ಧಾ .ಎಸ್.ಎಲ್. ರೈ. ಯವರು ಹದಿಹರೆಯದ ಬಗ್ಗೆ ಕಿಶೋರಿಯರಿಗೆ ಮಾಹಿತಿ ನೀಡಿದರು. ಬಳ್ಪ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಗಿರಿಜಾ ಮಕ್ಕಳ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು. ಸುಬ್ರಹ್ಮಣ್ಯ ಆರೋಗ್ಯ ಇಲಾಖೆಯ ಆರೋಗ್ಯ ಸಂದರ್ಶಕಿ ಶ್ರೀಮತಿ ಭಾಗ್ಯ ಬಿ.ಎನ್. ಪೌಷ್ಠಿಕ ಆಹಾರದ ಮಹತ್ವದ ಕುರಿತು , ಸಮತೋಲನ ಆಹಾರ ,ರಕ್ತ ಹೀನತೆ ತಡೆಗಟ್ಟುವಿಕೆ ಹಾಗೂ ಕಡಿಮೆ ತೂಕದ ಮಕ್ಕಳ ಪೂರಕ ಪೌಷ್ಠಿಕ ಆಹಾರದ ಬಗ್ಗೆ ಹಾಗೂ ಕೋವಿಡ್ ವ್ಯಾಕ್ಸಿನೇಶನ್ ನ ಬಗ್ಗೆ ಮಾಹಿತಿ ನೀಡಿದರು. ಸಂಜೀವಿನಿ ಒಕ್ಕೂಟದ ಸಂಯೋಜಕಿ ಶ್ರೀಮತಿ ಯಮುನಾ ಕಾರ್ಜ ಸ್ವಸಹಾಯ ಸಂಘಗಳ ಬಗ್ಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಸ್ತ್ರೀ ಶಕ್ತಿ ಸದಸ್ಯರುಗಳಿಗೆ ಹಾಗೂ ಕಿಶೋರಿಯರಿಗೆ ನಡೆಸಿದ ರಸಪ್ರಶ್ನೆ ಮತ್ತು ಪೌಷ್ಠಿಕ ಆಹಾರ ಪ್ರಾತ್ಯಕ್ಷತೆಗೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಎಣ್ಣೆಮಜಲು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹರಿಣಾಕ್ಷಿ ಎ. ಮತ್ತು ಕೇನ್ಯ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ದಮಯಂತಿ ಇವರು ಪೌಷ್ಠಿಕ ಪ್ರಾತ್ಯಕ್ಷತೆಯಲ್ಲಿ ಸಹಕರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಬಳ್ಪ ಶಾಲೆಯ ಶಿಕ್ಷಕಿ ಶ್ರೀಮತಿ ಭಾಗೀರಥಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಗೊಂಚಲಿನ ಸದಸ್ಯರುಗಳು, ಸ್ತ್ರೀ ಶಕ್ತಿ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು ಹಾಗೂ ಕಿಶೋರಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶ್ರೀಮತಿ ಗೋಪಮ್ಮ ಡಿ. ಪ್ರಾರ್ಥಿಸಿದರು. ಪೇರಳೆಕಟ್ಟೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮಮತಾ ಜೆ ಸ್ವಾಗತಿಸಿದರು. ಬಳ್ಪ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮೋಹಿನಿ ಎ. ಕಾರ್ಯಕ್ರಮ ನಿರೂಪಿಸಿದರು. ಸಂಪ್ಯಾಡಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಯಮುನಾ ಕೆ. ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.