ಓಡಬಾಯಿ: ಅಟೋರಿಕ್ಷಾಕ್ಕೆ ಬೈಕ್ ಢಿಕ್ಕಿ

Advt_Headding_Middle

 

ಬೈಕ್ ಸವಾರನಿಗೆ ಗಂಭೀರ ಗಾಯ

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಸಚಿವರ ಬೆಂಗಾವಲು ವಾಹನ
ಬೈಕ್ ಹಾಗೂ ಅಟೋರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯದ ಓಡಬಾಯಿಯಲ್ಲಿ ಸೆ.10ರಂದು ರಾತ್ರಿ ಸಂಭವಿಸಿದೆ.
ಜಾಲ್ಸೂರು ಗ್ರಾಮದ ಕೋನಡ್ಕಪದವು ನಿವಾಸಿ ಲೋಕೇಶ್ ಎಂಬವರು ತಮ್ಮ ಬೈಕ್ ನಲ್ಲಿ ಸುಳ್ಯದಿಂದ ಅಡ್ಕಾರು ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓಡಬಾಯಿ ಪೆಟ್ರೋಲ್ ಪಂಪ್ ಬಳಿ ಎದುರಿನಿಂದ ಬಂದ ನಿಂತಿಕಲ್ ನ ಅಬ್ದುಲ್ ರಜಾಕ್ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾಕ್ಕೆ ಬೈಕ್ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಪರಿಣಾಮ ಬೈಕ್ ಸವಾರ ಲೋಕೇಶ್ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡರು.
ಈ ಸಂದರ್ಭದಲ್ಲಿ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಸಚಿವ ಎಸ್. ಅಂಗಾರರ ಬೆಂಗಾವಲು ವಾಹನ ಅಲ್ಲಿಗೆ ತಲುಪಿದ್ದು, ಬಳಿಕ ಅದೇ ವಾಹನದಲ್ಲಿ ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.
ಆದರೆ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಗಾಯಾಳು ಲೋಕೇಶ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯನ್ನು ಮಾತುಕತೆಯ ಮೂಲಕ ರಾಜಿಯಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.