ಸುಳ್ಯ ಸರಕಾರಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – 2020ರ ಅರಿವು ಕಾರ್ಯಾಗಾರ

Advt_Headding_Middle

 

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬೋಧಕರು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಒಳಗೊಂಡಂತೆ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅರಿವು ಕಾರ್ಯಾಗಾರವನ್ನು ಸೆ. 7ರಂದು ಕಾಲೇಜಿನ ಪ್ರಾಂಶುಪಾಲ ಡಾ.ಅಚ್ಯುತ ಪೂಜಾರಿ ಯವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ರಾಶಿ ಎಂ. ಆರ್. ರವರು ರಾಷ್ಟ್ರೀಯ ಶಿಕ್ಷಣ ನೀತಿಯ ಧ್ಯೇಯೋದ್ದೇಶ ಹಾಗೂ ರೂಪುರೇಷೆಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಮಕೃಷ್ಣ ಕೆ.ಎಸ್. ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಹಂತಗಳಲ್ಲಿ ಪಡೆಯಬಹುದಾದ ಸರ್ಟಿಫಿಕೇಟ್, ಡಿಪ್ಲೊಮೋ, ಸ್ನಾತಕ ಪದವಿ ಹಾಗೂ ಆನರ್ ಪದವಿಗಳ ಕಾರ್ಯವ್ಯಾಪ್ತಿ ಹಾಗೂ ಬೋಧನಾ ವಿಷಯಗಳ ಬಗ್ಗೆ ವಿವರಿಸಿದರು.
ಯಾವುದೇ ರಾಷ್ಟ್ರ ನಿರ್ಮಾಣದ ಅಥವಾ ಸಮಾಜ ನಿರ್ಮಾಣದ ಕಾರ್ಯವನ್ನು ಅನುಷ್ಠಾನಗೊಳಿಸುವಾಗ ಅಡೆತಡೆಗಳು ಟೀಕೆ ಟಿಪ್ಪಣಿಗಳು ಸಹಜ ಆದರೆ ಅವುಗಳನ್ನು ಮೆಟ್ಟಿಲುಗಳನ್ನಾಗಿಸಿ ಯೋಜಿತ ಗುರಿಯನ್ನು ಸಾಧಿಸುವುದು ನಿಜವಾದ ಸಾಧನೆ ಎಂದು ಪ್ರಾಂಶುಪಾಲ ಡಾ. ಅಚ್ಯುತ ಪೂಜಾರಿ ಹೇಳಿದರು.
ಕಾಲೇಜಿನ ಐಕ್ಯೂಎಸಿ ಹಾಗೂ ಎನ್ ಇಪಿ ಸಂಚಾಲಕರಾದ ಡಾ. ಜಯಶ್ರೀ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದು ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪುಷ್ಪರಾಜ್ ಕೆ. ವಂದಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಧನ್ ರಾಜ್ ಬಿ.ಸಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಗಾರದಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪೋಷಕರು ಸೇರಿದಂತೆ ಸುಮಾರು 60 ಮಂದಿ ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.