Breaking News

ಪಂಜ: ಪೋಷಣ್ ಮಾಸಾಚರಣೆ ಮತ್ತು ಪೌಷ್ಠಿಕ ಆಹಾರ ಸಪ್ತಾಹ

Advt_Headding_Middle

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಪಂಜ ಗ್ರಾಮ ಪಂಚಾಯತ್ ಮತ್ತು ತುಳಸಿ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಪಂಜ ಇದರ ಜಂಟಿ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ ಮತ್ತು ಮಾತೃ ವಂದನಾ ಸಪ್ತಾಹ, ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ಸೆ.7 ರಂದು ಪಂಜ ಗ್ರಾ.ಪಂ. ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಂ.ಪಂ. ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ಕೆ.ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿ ಪೋಷನ್ ಅಭಿಯಾನದ ಉದ್ದೇಶಗಳು, ಅಪೌಷ್ಟಿಕ ಮಕ್ಕಳನ್ನು ಗುರುತಿಸುವಿಕೆ ಗರ್ಭಿಣಿ ಮತ್ತು ಬಾಣಂತಿಯ ಸಮತೋಲನ ಆಹಾರ ಸೇವನೆ ಮತ್ತು ಇಲಾಖೆಯ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಅರ್ಹ ಫಲಾನುಭವಿಗಳಿಂದ ಮಾತೃ ವಂದನಾ ಅರ್ಜಿ ಸ್ವೀಕರಿಸಿದರು.

ಆರೋಗ್ಯ ಸಂದರ್ಶಕಿ ಶ್ರೀಮತಿ ರಾಹೇಲಮ್ಮ 18 ವರ್ಷದಿಂದ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು ಕೋವಿಡ್-19 ರೋಗ ಹರಡದಂತೆ ವ್ಯಾಕ್ಸಿನೇಶನ್ ಪಡೆದುಕೊಳ್ಳುವಂತೆ ತಿಳಿಸಿದರು. ಆರೋಗ್ಯ ಸಹಾಯಕಿ ಶ್ರೀಮತಿ ಸತ್ಯವತಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ನೀಡಿದರು. ಪೌಷ್ಠಿಕ ಆಹಾರ ಪ್ರಾತ್ಯಕ್ಷತೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. 2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಗೊಂಚಲು ಸಮಿತಿಯಿಂದ ಶಾಲು ಹೊದಿಸಿ ಗೌರವಿಸಿದರು. ಇಲಾಖೆಯಿಂದ ಜನಮೆಚ್ಚಿದ ಅಧಿಕಾರಿಯಾಗಿ ಆಯ್ಕೆಯಾದ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆಯವರನ್ನು ಮತ್ತು ವಾಹನ ಚಾಲಕರಾದ ಯೋಗೀಶ್ ರನ್ನು ಗೊಂಚಲಿನ ಅಧ್ಯಕ್ಷೆ, ಕಾರ್ಯದರ್ಶಿ ಹಾಗೂ ಅಂನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ನೇತ್ರಾವತಿ ಕಲ್ಲಾಜೆ ಬ್ಲಾಕ್ ಸೊಸೈಟಿ ಸದಸ್ಯೆ ಶ್ರೀಮತಿ ಮಮತಾ ನಡ್ಕ, ಗ್ರಾಂ.ಪಂ.ವಸದಸ್ಯರುಗಳು,ಗೊಂಚಲಿನ ಅಧ್ಯಕ್ಷರು, ಬಾಲವಿಕಾಸ ಸಮಿತಿ ಅಧ್ಯಕ್ಷರು, ಮೇಲ್ವಿಚಾರಕಿ ಶ್ರೀಮತಿ ರವಿಶ್ರೀ. ಕೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ವನಿತಾ ಸಮಾಜದ ಅಧ್ಯಕ್ಷರು ಮತ್ತು ಸದಸ್ಯರುಗಳು, ವಿಧ್ಯಾರ್ಥಿಗಳು, ಪೋಷಕರು, ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು. ಶ್ರೀಮತಿ ದೇವಕಿ ನಾಗತೀರ್ಥ ಪ್ರಾರ್ಥಿಸಿ ಶ್ರೀಮತಿ ರವಿಶ್ರೀ ಸ್ವಾಗತಿಸಿದರು. ಶ್ರೀಮತಿ ರತ್ನಾವತಿ ಬೊಳ್ಳಾಜೆ ವಂದಿಸಿದರು. ವನಿತಾ ಸಮಾಜದ ಮಾಜಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಡಿ. ಪ್ರಸಾದ್ ಕಾನತ್ತೂರು ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.