ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Advt_Headding_Middle

 

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್ಎಸ್ಎಸ್, ಎನ್ ಸಿ ಸಿ, ಯುವ ರೆಡ್ ಕ್ರಾಸ್ ಹಾಗೂ ರೋವರ್- ರೇಂಜರ್ ಘಟಕಗಳ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತಿ , ಸಾಮಾಜಿಕ ಕಾರ್ಯಕರ್ತ ಹಿಮಕರ್ ಎ ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಬಾಲಚಂದ್ರ ಗೌಡ ಎಂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಪನ್ಯಾಸಕಿ ಪ್ರಣೀತಾ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ರೋವರ್ ಘಟಕದ ಕಾರ್ಯಕ್ರಮಾಧಿಕಾರಿ ತಿಪ್ಪೇಸ್ವಾಮಿ ಸ್ವಾಗತಿಸಿ, ರೇಂಜರ್ ಘಟಕದ ಕಾರ್ಯಕ್ರಮಾಧಿಕಾರಿ ಹರ್ಷಕಿರಣ ಧನ್ಯವಾದ ಸಮರ್ಪಿಸಿ , ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು. ಎನ್ ಎಸ್ ಎಸ್ ಘಟಕಾಧಿಕಾರಿಗಳಾದ ಸಂಜೀವ ಕುದ್ಪಾಜೆ, ಚಿತ್ರಲೇಖಾ ಕೆ ಎಸ್, ಎನ್ ಸಿ ಸಿ ಅಧಿಕಾರಿ ಲೆ. ಸೀತಾರಾಮ ಎಂ ಡಿ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ಹಾಗೂ ಬೊಧಕೇತರ ವೃಂದದವರು ಉಪಸ್ಥಿತರಿದ್ದರು. ಆರಂಭದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.