Breaking News

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ್ತಾರೋಗಣೆ, ನವಾನ್ನ ಪ್ರಸಾದ

Advt_Headding_Middle

 

 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸೆ.13 ರಂದು ಹೊಸ್ತಾರೋಗಣೆ (ನವಾನ್ನ ಪ್ರಸಾದ) ಮತ್ತು ಕದಿರು ಕಟ್ಟುವ ಕಾರ್ಯವು ವಿವಿಧ ವೈಧಿಕ ವಿದಿ ವಿಧಾನಗಳೊಂದಿಗೆ ನೆರವೇರಿತು. ಈ ನಿಮಿತ್ತ ಪ್ರಾತಃಕಾಲ ಪಂಚಾಮೃಮಹಾಭಿಷೇಕವನ್ನು ಶ್ರೀ ದೇವರ ಮೂಲ ವಿಗ್ರಹಕ್ಕೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ನೆರವೇರಿಸಿದರು. ವರ್ಷದಲ್ಲಿ ಹೊಸ್ತಾರೋಗಣೆಯ ಒಂದು ದಿನ ಮಾತ್ರ ಮೂಲ ವಿಗ್ರಹಕ್ಕೆ ಮಹಾಭಿಷೇಕ ನಡೆಯುವುದು ಕುಕ್ಕೆಯ ವಿಶೇಷ. ಉಳಿದ ದಿನಗಳಲ್ಲಿ ಉತ್ಸವ ಮೂರ್ತಿಗೆ ಅಭಿಷೇಕ ನೆರವೇರುತ್ತದೆ.
ಅಭಿಷೇಕದ ಬಳಿಕ ತೆನೆ ತರಲು ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ದರ್ಪಣತೀರ್ಥ ನದಿ ತೀರಕ್ಕೆ ತೆರಳಿದರು. ನಂತರ ಬತ್ತದ ತೆನೆ(ಕೊರಳ್)ಗೆ ದರ್ಪಣ ತೀರ್ಥ ನದಿಯ ತಟದಲ್ಲಿ ಪೂಜೆ ನೆರವೇರಿಸಿದರು. ಕ್ಷೇತ್ರ ಪುರೋಹಿತ ಮಧುಸೂದನ ಕಲ್ಲೂರಾಯ, ಪುರೋಹಿತರಾದ ಸರ್ವೇಶ್ವರ ಭಟ್, ಕುಮಾರ ಭಟ್, ಪ್ರಸಾದ್ ಕಲ್ಲೂರಾಯ ಮಂತ್ರಘೋಷ ಮಾಡಿದರು. ಬಳಿಕ ಬತ್ತದ ತೆನೆಯನ್ನು ದೀವಟಿಗೆ, ಬ್ಯಾಂಡ್, ವಾದ್ಯದ ನಿನಾದದೊಂದಿಗೆ ಮಂತ್ರಘೋಷದೊಂದಿಗೆ ಮೆರವಣಿಗೆಯಲ್ಲಿ ದೇವಳಕ್ಕೆ ತರಲಾಯಿತು. ಶ್ರೀ ದೇವಳಕ್ಕೆ ಒಂದು ಪ್ರದಕ್ಷಿಣೆ ಬಂದು ಅರ್ಚಕರು ತೆನೆಯನ್ನು ಗರ್ಭಗುಡಿಗೆ ಕೊಂಡೊಯ್ದರು. ನಂತರ ಶ್ರೀ ದೇವರ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರು ಕದಿರು ಪೂಜೆ ನೆರವೇರಿಸಿದರು.ಬಳಿಕ ಶ್ರೀ ದೇವಳದ ಗರ್ಭಗುಡಿಗೆ ಕದಿರು ಕಟ್ಟಿದರು.
ನಂತರ ಶ್ರೀ ದೇವಳಕ್ಕೆ, ಉಪ ದೇವರುಗಳ ಗುಡಿಗೆ, ಕಛೇರಿಗೆ ಕದಿರನ್ನು ಕಟ್ಟಲು ವಿತರಿಸಲಾಯಿತು. ಬಳಿಕ ಶ್ರೀ ದೇವಳದ ಆಡಳಿತ ಮಂಡಳಿಗೆ ಕದಿರನ್ನು ನೀಡಲಾಯಿತು. ತದನಂತರ ಅಲ್ಲಿ ಸೇರಿದ್ದ ನೌಕರ ವೃಂದಕ್ಕೆ ಮತ್ತು ಸ್ಥಳೀಯ ಭಕ್ತಾಧಿಗಳಿಗೆ ಕದಿರನ್ನು ಶ್ರೀ ದೇವಳದ ಅರ್ಚಕ ವೇದಮೂರ್ತಿ ರಮೇಶ ನೂರಿತ್ತಾಯ ವಿತರಿಸಿದರು. ಸರದಿಯ ಸಾಲಿನಲ್ಲಿ ನಿಂತು ಸರಕಾರದ ಕೋವಿಡ್-೧೯ ಮಾರ್ಗಸೂಚಿಗೆ ಅನುಗುಣವಾಗಿ ಊರ ಭಕ್ತರು ಕದಿರ ಪ್ರಸಾದವನ್ನು ಸ್ವೀಕರಿಸಿದರು. ಬಳಿಕ ಹೊಸ್ತಾರೋಗಣೆಯ ಪ್ರಯುಕ್ತ ಶ್ರೀ ದೇವರಿಗೆ ಗರ್ಭಗುಡಿಯ ಎದುರಿನ ಮಂಟಪದಲ್ಲಿ ಪಂಚಾಮೃತ ಮಹಾಭಿಷೇಕ, ವಿಶೇಷ ಪೂಜೆ ಹಾಗೂ ನವಾನ್ನ ನೈವೇಧ್ಯ ಸಮರ್ಪಿತವಾಯಿತು. ಶುಭದಿನದ ನಿಮಿತ್ತ ಶ್ರೀ ದೇವಳವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಸಹಸ್ರಾರು ಭಕ್ತಾಧಿಗಳು ಶ್ರೀ ದೇವರ ನವಾನ್ನ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.
ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಶೋಭಾ ಗಿರಿಧರ್, ಪಿ.ಜಿ.ಎಸ್.ಎನ್.ಪ್ರಸಾದ್, ಮನೋಹರ ರೈ, ಲೋಕೇಶ್ ಮುಂಡೋಕಜೆ, ಮಾಸ್ಟರ್ ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಮನೋಜ್ ಸುಬ್ರಹ್ಮಣ್ಯ, ಚಂದ್ರಶೇಖರ ಮರ್ಧಾಳ, ಚಂದ್ರಶೇಖರ ನಲ್ಲೂರಾಯ, ಕಿಶೋರ್ ಕೂಜುಗೋಡು ಸೇರಿದಂತೆ ದೇವಳದ ಸಿಬ್ಬಂಧಿಗಳು ಮತ್ತು ಊರ ಭಕ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.